ಪ್ರಜಾಪ್ರಭುತ್ವ ಎನ್ನುವುದು ಕೇವಲ ಒಂದು ಆಡಳಿತ ವ್ಯವಸ್ಥೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಧ್ವನಿ. ಆ ಧ್ವನಿಗೆ ಶಕ್ತಿ ತುಂಬುವುದು ಪ್ರಜೆಗಳ ಕರ್ತವ್ಯವಾಗಿದೆ. ಪ್ರತಿಯೊಂದು ಮತವೂ ದೇಶದ ಭವಿಷ್ಯವನ್ನು ರೂಪಿಸುವ ಮತ್ತು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಪವಿತ್ರ ಕರ್ತವ್ಯವಾಗಿದೆ. ಅಗತ್ಯ ದಾಖಲೆ ನೀಡಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ತಹಸೀಲ್ದಾರ್ ಕೃಷ್ಣಮೂರ್ತಿ, ಚುನಾವಣಾ ವಿಭಾಗದ ಶಿರೇಸ್ತೆದಾರ್ ಲೋಹಿತ್, ಆರ್‌ಐ ಪ್ರಹ್ಲಾದ್ ಇದ್ದರು.