ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಹಾಗೂ ಬೆಳಗಾವಿ ಹಿಂಡಲಗಾ ಜೈಲು ಸೇರಿ ಕೇಂದ್ರ ಕಾರಾಗೃಹ ಬಳ್ಳಾರಿ ಜೈಲಿನಲ್ಲಿರುವ ಉಗ್ರರು ಹಾಗೂ ಕೈದಿಗಳು ಜೈಲಿನಲ್ಲಿದ್ದುಕೊಂಡೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದನ್ನು ಎನ್‌ಐಎ ಪತ್ತೆ ಮಾಡಿದೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಹಾಗೂ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸುಮಾರು 300ಕ್ಕೂ ಹೆಚ್ಚು ಉಗ್ರರು ಸೆರೆವಾಸ ಅನುಭವಿಸುತ್ತಿದ್ದಾರೆ. ಕೆಲ ಉಗ್ರರು ಜೈಲಿನಿಂದಲೆ ಐಸಿಎಸ್, ಲಷ್ಕರ್ ಎ -ತೋಯ್ಬ, ಅಲ್-ಖೈದಾ. ಜೈಷೆ, ಎಲ್‌ಇಟಿ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಕಲೆ ಹಾಕಿ ತನಿಖೆ ಆರಂಭಿಸಿದೆ.