ಕುಡಿವ ನೀರಿನ ಸಮಸ್ಯೆ ಆಗದಂತೆ ಗಮನಹರಿಸಿ

ಔರಾದ್​ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ  ಆಯೋಜಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಸಿಇಒ ಡಾ.ಗಿರೀಶ್​ ಬದೋಲೆ ಮಾತನಾಡಿದರು. ಅಧಿಕಾರಿಗಳಾದ  ಮಾಣಿಕರಾವ ಕೆರೂರ, ಕಿರಣ ಪಾಟೀಲ್​, ಶಿವಕುಮಾರ ಘಾಟೆ ಇತರರಿದ್ದರು.
ಔರಾದ್​ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಸಿಇಒ ಡಾ.ಗಿರೀಶ್​ ಬದೋಲೆ ಮಾತನಾಡಿದರು. ಅಧಿಕಾರಿಗಳಾದ ಮಾಣಿಕರಾವ ಕೆರೂರ, ಕಿರಣ ಪಾಟೀಲ್​, ಶಿವಕುಮಾರ ಘಾಟೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಇಒ ಡಾ.ಗಿರೀಶ್​ ಬದೋಲೆ ಸೂಚನೆ
  • ಔರಾದ್​ನಲ್ಲಿ ಅಧಿಕಾರಿಗಳ ಸಭೆ
ಔರಾದ್​: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್​ ಬದೋಲೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಭವಿಷ್ಯದ ದೃಷ್ಟಿಯಿಂದ ಜಲ ಸಂರಣೆ ಮತ್ತು ಜಲ ಸಂಪನ್ಮೂಲಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಳೆ ನೀರು ಸಂಗ್ರಹಣೆ, ಚೆಕ್​ ಡ್ಯಾಂ ನಿರ್ಮಾಣ, ಕೆರೆ ಅಭಿವೃದ್ಧಿ ಹಾಗೂ ಜಲಮಟ್ಟ ಹೆಚ್ಚಿಸುವ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು ವಲಸೆ ಹೋಗದಂತೆ ತಡೆಯಲು ಗ್ರಾಪಂ ಮಟ್ಟದಲ್ಲಿಯೇ ನರೇಗಾ ಯೋಜನೆಯಡಿ ನಿರಂತರ ಉದ್ಯೋಗ ಕಲ್ಪಿಸಬೇಕು. ಕೂಲಿ ಕಾರ್ಮಿಕರಿಗೆ ಬೇಡಿಕೆಗೆ ಅನುಗುಣವಾಗಿ ಕೆಲಸ ನೀಡುವ ಮೂಲಕ ಹೆಚ್ಚು ಮಾನವ ದಿನಗಳ ಸೃಜನೆಗೆ ಆದ್ಯತೆ ನೀಡಬೇಕು ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಮಾಣಿಕರಾವ ಕೆರೂರ, ತಾಪಂ ಇಒ ಕಿರಣ ಪಾಟೀಲ್​, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net