ನೀರಿನ ಸಮಸ್ಯೆ ಆಗದಂತೆ ನಿಗಾವಹಿಸಿ

ಯಾದಗಿರಿಯಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್​ ಜೈನ ಮಾತನಾಡಿದರು. ಡಿಸಿ ಪಾಂಡ್ವೆ ರಾಹುಲ್​ ತುಕರಾಮ, ಜಿಪಂ ಸಿಇಒ ಲವೀಶ್​ ಒರ್ಡಿಯಾ ಇತರರಿದ್ದರು.
ಯಾದಗಿರಿಯಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್​ ಜೈನ ಮಾತನಾಡಿದರು. ಡಿಸಿ ಪಾಂಡ್ವೆ ರಾಹುಲ್​ ತುಕರಾಮ, ಜಿಪಂ ಸಿಇಒ ಲವೀಶ್​ ಒರ್ಡಿಯಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್​ ಜೈನ ಸೂಚನೆ
  • ಪ್ರಗತಿ ಪರಿಶೀಲನಾ ಸಭೆ
ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸುವ ಜತೆಗೆ ಪ್ರತಿ ಗ್ರಾಮಕ್ಕೆ ಸಂಬಂಧಿಸಿದ ಅಧಿಕಾರಿಗಳು ೇತ್ರ ಭೇಟಿ ನೀಡಿ ನೀರಿನ ಸಮಸ್ಯೆ ನಿವಾರಣೆಗೆ ವಿಶೇಷ ಕಾಳನಿ ವಹಿಸುವಂತೆ ರಾಜ್ಯ ಸರ್ಕಾರದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್​ ಜೈನ ಸಂಬಂಧಿಸಿದ ಅಧಿಕಾರಿಕಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಮೇ ತಿಂಗಳವರೆಗಿನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಶುದ್ಧ ನೀರು ಪಡೆಯುವುದು ಜನರ ಹಕ್ಕು. ನೂರು ಜನರಿದ್ದರೂ ಆ ಗ್ರಾಮದಲ್ಲಿ ನೀರಿನ ಸಮಸ್ಯೆಯಾದರೆ ಸಂಬಂಧಿಸಿದ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸಬೇಕು. ಪ್ರತಿ ವಾರ ಸಮಸ್ಯೆ ಇರುವ ಕಡೆ ಭೇಟಿ ನೀಡಬೇಕು. ವಿಶೇಷವಾಗಿ ಗ್ರಾಪಂ ಕೇಂದ್ರಕ್ಕೆ ೇತ್ರ ಭೇಟಿ ನೀಡಿ, ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು ಎಂದು ತಾಕೀತು ಮಾಡಿದರು.
ಇಒಗಳು ಪ್ರತಿ ವಾರ ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಬೇಕು. ನೋಡಲ್​ ಅಧಿಕಾರಿಗಳು ಕೂಡ ಪ್ರತಿ ಗ್ರಾಮ ಹಾಗೂ ತಾಲೂಕು ಪಂಚಾಯಿತಿವಾರು ನೀರಿನ ಸಮಸ್ಯೆ ನಿವಾರಣೆ ಕುರಿತು ನಿಗಾ ವಹಿಸುವಂತೆ ತಿಳಿಸಿದ ಅವರು, ತಹಸೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ವಿಶೇಷ ಗಮನ ನೀಡುವಂತೆ ಸೂಚನೆ ನೀಡಿದರು.
ನಗರದ ಸ್ವಚ್ಛತೆ ಕುರಿತಂತೆ ನಗರಸಭೆ ಆಯುಕ್ತರು ಹಾಗೂ ಸ್ಯಾನಿಟರಿ ಅಧಿಕಾರಿಗಳು ವಾರ್ಡವಾರು ೇತ್ರ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಗಾಂಧಿ ಚೌಕ್​, ಗಂಜ್​, ಹನುಮಾನ್​ ಚೌಕ್​, ಲುಂಬಿನಿ ಉದ್ಯಾನವನ, ಹೊಸಳ್ಳಿ ಕ್ರಾಸ್​, ರೈಲ್ವೆ ಸ್ಟೇಷನ್​ ವ್ಯಾಪ್ತಿಯಲ್ಲಿನ ರಸ್ತೆಗಳ ಸುಧಾರಣೆಗೆ ಗಮನ ಹರಿಸಬೇಕು. ಈ ಕುರಿತು ಪ್ರಸ್ತಾವನೆ ಸಹ ಸಲ್ಲಿಸಬೇಕೆಂದ ಅವರು, ಪಿಆರ್​ಇಡಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ನಿರ್ಮಿತಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ರಾಹುಲ್​ ತುಕಾರಾಮ ಪಾಂಡ್ವೆ ಮಾತನಾಡಿ, ಕಾರ್ಯದರ್ಶಿಗಳು ಸೂಚಿಸಿದಂತೆ ಕಾಲ ಕಾಲಕ್ಕೆ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಗಳ ವರದಿಯೊಂದಿಗೆ ಅಧಿಕಾರಿಗಳು ಆಗಮಿಸುವಂತೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್​ ಒರ್ಡಿಯಾ ಅವರು ಜಿಲ್ಲೆಯಲ್ಲಿ 471 ಆರ್​ಒ ಪ್ಲಾಂಟ್​ಗಳ ಪೈಕಿ 332 ಕಾರ್ಯನಿರ್ವಹಿಸುತ್ತಿವೆ. ಬಾಕಿ ಇರುವ ಆರ್​ಒ ದುರಸ್ತಿ ಗೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಜಿಲ್ಲಾ ಪೋಲಿಸ್​ ವರಿಷ್ಠಾಧಿಕಾರಿ ಪೃಥ್ವಿಕ್​ ಶಂಕರ್​ ಸೇರಿ ಇತರರಿದ್ದರು.
ಗುರುಮಠಕಲ್​ನ 36 ಗ್ರಾಮಗಳಿಗೆ ನೀರು ಪೂರೈಸಿ
ಜಿಲ್ಲೆಯ ಗುರುಮಠಕಲ್​ ಮತ್ತು ವಡಗೇರಾ ತಾಲೂಕುಗಳ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಅಗತ್ಯ ಗಮನ ಹರಿಸಬೇಕು. ಗುರುಮಠಕಲ್​ 36 ಗ್ರಾಮಗಳಿಗೆ ನೀರು ಪೂರೈಸುವ ಯೋಜನೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿನ ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲೆಯಲ್ಲಿ ಭತ್ತದ ಬದಲಾಗಿ ಪರ್ಯಾಯ ಬೆಳೆಗಳ ಬಗ್ಗೆ ರೈತರಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು. ಬೀಜ, ರಸಗೊಬ್ಬರಗಳ ಲಭ್ಯತೆ ಅನುಸಾರ ಸಣ್ಣ ಅತಿ ಸಣ್ಣ ರೈತರಿಗೂ ವಿಶೇಷ ಗಮನ ನೀಡಬೇಕು. ಬೀಜ, ರಸಗೊಬ್ಬರ ಸಮಾನ ಹಂಚಿಕೆ ಮಾಡುವಂತೆ ನೋಡಿಕೊಳ್ಳಬೇಕು. ಕಡಿಮೆ ನೀರು, ಕಡಿಮೆ ರಸಗೊಬ್ಬರದಡಿ ಹೆಚ್ಚು ಇಳುವರಿ ತರುವ ಬೆಳೆಗಳನ್ನು ಬೆಳೆಸಲು ರೈತರಿಗೆ ತಿಳಿಹೇಳಿ ಬೇಕು ಎಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಮಾನತು ಆದೇಶ ಸಿದ್ದಪಡಿಸಲು ಸೂಚನೆ
ಸ್ವಚ್ಛ ಭಾರತ ಮಿಷನ್​ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ 50 ಶೌಚಗೃಹ ನಿರ್ಮಾಣ ಹಾಗೂ ಇತರೆ ಕಾಮಗಾರಿ ನಿರ್ಮಾಣದಲ್ಲಿ ರ್ನಿಲ್ಯ ತೋರಿದ ಹಿನ್ನೆಲೆಯಲ್ಲಿ ಕೆಆರ್​ಐಡಿಎಲ್​ ಸಹಾಯಕ ನಿರ್ದೇಶಕರನ್ನು ಅಮಾನತುಗೊಳಿಸಿ ಆದೇಶ ಸಿದ್ಧಪಡಿಸಲು ಸೂಚಿಸಿದ ಅವರು, ಸಭೆಗೆ ಗೈರು ಹಾಜರಾದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್​ ಜಾರಿಗೊಳಿಸಲು ಸೂಚಿಸಿದರು. ಅದರಂತೆ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಾಗೂ ಶಾಲಾ ಶಿಣ ವ್ಯವಸ್ಥೆ ಸುಧಾರಣೆಗೆ ಸೂಕ್ತ ಕ್ರಮ ಕೈಗೊಂಡ ಶಾಲಾ ಶಿಣ ಇಲಾಖೆ ಉಪನಿರ್ದೇಶಕರಿಗೆ ಪ್ರಶಂಸಣಾ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಅವರು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net