ಕುಡಿವ ನೀರಿನ ಸಮಸ್ಯೆ ಆಗದಂತೆ ಕಾಳಜಿ ವಹಿಸಿ

ಬಸವಕಲ್ಯಾಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಡಿಯುವ ನೀರಿನ ನಿರ್ವಹಣೆ ಕುರಿತ ಸಭೆಯಲ್ಲಿ ತಾಪಂ ಇಒ ಅಧಿಕಾರಿ ರಮೇಶ ಸುಲ್ಪಿ ಮಾತನಾಡಿದರು. ಮಹ್ಮದ್​ ಸಲೀಂ ಇದ್ದರು.
ಬಸವಕಲ್ಯಾಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಡಿಯುವ ನೀರಿನ ನಿರ್ವಹಣೆ ಕುರಿತ ಸಭೆಯಲ್ಲಿ ತಾಪಂ ಇಒ ಅಧಿಕಾರಿ ರಮೇಶ ಸುಲ್ಪಿ ಮಾತನಾಡಿದರು. ಮಹ್ಮದ್​ ಸಲೀಂ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಇಒ ರಮೇಶ ಸುಲ್ಪಿ ಸೂಚನೆ
  • ಬಸವಕಲ್ಯಾಣ ತಾಪಂ ಕಚೇರಿಯಲ್ಲಿ ಸಭೆ
 ಬಸವಕಲ್ಯಾಣ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕಾಳಜಿ ವಹಿಸಬೇಕು ಎಂದು ಅಧಿಕಾರಿ ಹಾಗೂ ಸಿಬ್ಬಂದಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಮೇಶ ಸುಲ್ಪಿ ಸೂಚಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಡಿಯುವ ನೀರಿನ ನಿರ್ವಹಣೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಗ್ರಾಮಗಳಲ್ಲಿ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಕಂಡು ಬರುವ ಕಡೆ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಮೂಲಗಳಿಂದ ನೀರು ಖರೀದಿಸಿ ಸಾರ್ವಜನಿಕರಿಗೆ ಪೂರೈಕೆ ಮಾಡಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ನಿರ್ವಹಣೆಯಲ್ಲಿ ಸಿಬ್ಬಂದಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಾರಕ್ಕೆ ಕನಿಷ್ಠ ಒಂದು ಬಾರಿ ನೀರಿನ ಟ್ಯಾಂಕರ್​ಗಳನ್ನು ಸ್ವಚ್ಛಗೊಳಿಸಿ ಶುದ್ಧ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು. ಜತೆಗೆ ಗ್ರಾಮಗಳಲ್ಲಿ ನೀರಿನ ಪೈಪ್​ಗಳು ಹಾನಿಗೊಳಗಾದರೆ ತಕ್ಷಣ ಜಿಪಿಎಸ್​ ಫೋಟೋ ತೆಗೆದು ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಿ ದುರಸ್ತಿ ಕಾರ್ಯ ಶ್ರೀ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಎಇಇ ಶಿವರಾಜ ಪಲ್ಲೇರಿ ಮಾತನಾಡಿ, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾದಲ್ಲಿ ಖಾಸಗಿ ಬಾವಿ ಹಾಗೂ ಕೊಳವೆ ಬಾವಿಗಳನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳುವ ಅವಕಾಶವಿದೆ. ಇದಕ್ಕೆ ಸರ್ಕಾರದಿಂದ ಅಗತ್ಯ ಅನುದಾನವೂ ಲಭ್ಯವಿದೆ ಎಂದು ಮಾಹಿತಿ ನೀಡಿದರು.
 ತಾಪಂ ಸ.ನಿ.ಮಹ್ಮದ್​ ಸಲೀಂ,  ವಿಷಯ ನಿರ್ವಾಹಕ ಮಲ್ಲಿಕಾರ್ಜುನ, ಐಇಸಿ ಸಂಯೋಜಕ ವೀರಾರೆಡ್ಡಿ ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.
=====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net