

ಕರ್ತವ್ಯನಿರತ ಸರ್ಕಾರಿ ನೌಕರರ ವಿರುದ್ಧ ಸುಳ್ಳು ಜಾತಿ ನಿಂದನೆ ದೂರು ನೀಡಿರುವ ಶಹಾಪುರದ ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಪ್ರದೀಪ ಅಣಬಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರಿಗೆ ಮನವಿ ಸಲ್ಲಿಸಿದ್ದಾರೆ.