ನೀರೇ ಜೀವ. ನೀರಿಲ್ಲದೆ ಬದುಕು ಸಾಧ್ಯವಿಲ್ಲ. ಬೇಸಿಗೆಯ ಸಮಯದಲ್ಲಿ ನಮ್ಮ ಗ್ರಾಮ ಮತ್ತು ಪಟ್ಟಣಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವುದು ಹೆಚ್ಚಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಹರಿಸಬೇಕಾಗಿದೆ. ಹೀಗಾಗಿ ಎಲ್ಲ ಅಧಿಕಾರಿಗಳು ಯಾವುದೇ ಗ್ರಾಮದಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಚಿತವಾಗಿಯೇ ನೀರಿನ ಮೂಲಗಳನ್ನು ಪರಿಶೀಲಿಸಿ, ಬೋರ್ವೆಲ್ಗಳ ದುರಸ್ತಿ ಕಾರ್ಯಗಳನ್ನು ತಣ ಕೈಗೊಳ್ಳಬೇಕು. ಹಾಳಾಗಿರುವ ಪಂಪ್, ಮೋಟಾರ್, ಪೈಪ್ಲೈನ್ಗಳನ್ನು ಸರಿಪಡಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡುವ ವ್ಯವಸ್ಥೆಯನ್ನು ಕೂಡ ತಣ ಜಾರಿಗೆ ತರಬೇಕು. ಜನರಿಗೆ ನೀರು ಸಿಗದೇ ಸಂಕಷ್ಟ ಅನುಭವಿಸುವ ಪರಿಸ್ಥಿತಿ ಬರಬಾರದು. ಇದು ನಮ್ಮೆಲ್ಲರ ಜವಾಬ್ದಾರಿ ಎಂದರು.