ಔರಾದ್ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಪಂ ಇಒ ಕಿರಣ ಪಾಟೀಲ್ ಮಾತನಾಡಿದರು. ಎಡಿ ಶಿವಕುಮಾರ ಘಾಟೆ, ಆನಂದ ಕಾಳಗಾಪುರೆ, ಸಂಜುಕುಮಾರ್ ಇತರರಿದ್ದರು.
Published on:
Copied
Follow Us
ಔರಾದ್ : ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿನ ಕುಡಿಯುವ ನೀರಿನ ಮೂಲ ಪರಿಶೀಲಿಸಿ, ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಆದ್ಯತೆ ನೀಡಬೇಕು. ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು ಗ್ರಾಮಗಳ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಮಾತನಾಡಿ, ವಿಬಿಜಿ ರಾಮ್ಜಿ ಯೋಜನೆಯಡಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಪಂ ವ್ಯವಸ್ಥಾಪಕ ಸಂಜುಕುಮಾರ, ತಾಲೂಕಿನ ಎಲ್ಲ ಪಿಡಿಒ, ತಾಂತ್ರಿಕ ಸಹಾಯಕರು, ಡಿಇಒ, ಐಇಸಿ ಸಂಯೋಜಕ ಹಾಗೂ ಸಿಬ್ಬಂದಿ ಇದ್ದರು.