ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ

Take steps to ensure that eligible voters are not left off the list.
Take steps to ensure that eligible voters are not left off the list.
Published on
ಕೋಲಾರ: ಅರ್ಹ ನಾಗರಿಕರೆಲ್ಲರಿಗೂ ಮತದಾನದ ಹಕ್ಕು ಸಿಗುವಂತೆ ಮಾಡಲು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ವ್ಯಾಪಕವಾಗಿ ಪ್ರಾಚಾರ ಕೈಗೊಳ್ಳಲು ಅಧಿಕಾರಿಗಳಿಗೆ ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್​ ತಿಳಿಸಿದರು.
ಎಸ್​ಐಆರ್​ ಸಂಬಂಧ ಸ್ವೀಪ್​ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆಂದೋಲನವನ್ನು ಯಶಸ್ವಿಗೊಳಿಸಲು, ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಸ್ವೀಪ್​ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿದಂತೆ ಕ್ರಮ ವಹಿಸುವುದು. ಯಾವುದೇ ಅನರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸದಂತೆ ಎಚ್ಚರ ವಹಿಸುವುದು, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ. ಅದೇ ರೀತಿ ಹಿಂದಿನ ಸಮಗ್ರ ಪರಿಷ್ಕರಣೆಯ ಮತದಾರರ ಪಟ್ಟಿಗೆ ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ಮತದಾರರ ಅರ್ಹತೆಯನ್ನು ಪರಿಶೀಲಿಸುವುದು ಅಗತ್ಯವಾಗಿದೆ ಎಂದರು.
ಹೊಸ ಮತದಾರರ ಸೇರ್ಪಡೆ, ಮರಣ ಹೊಂದಿದ ವ್ಯಕ್ತಿಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವುದು. ಖಾಯಂ ಆಗಿ ವಾಸಸ್ಥಳ ಬದಲಾಯಿಸಿದವರ ಅಥವಾ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನಮೂದಾಗಿರುವ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲು ಕ್ರಮ ವಹಿಸಲಾಗುತ್ತದೆ. ಈ ವೇಳೆ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಪಂಚಾಯಿತಿ ಅಭಿವೃದ್ಧಿ ಆಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಎಸ್​ಐಆರ್​ಗೆ ಪೂರಕವಾಗಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮತದಾರರ ಸಹಾಯ ಕೇಂದ್ರಗಳನ್ನು ಸ್ಥಾಪಿಸಬೇಕು. ಸರ್ವಜನಿಕರಿಗೆ ಸುಲಭವಾಗಿ ಮಾಹಿತಿ ದೊರೆಯಲು, ಅವರ ಗೊಂದಲಗಳ ನಿವಾರಣೆಗೆ ಸಿಬ್ಬಂದಿಯ ಪೋನ್​ ನಂಬರ್​ಗಳನ್ನು ಪ್ರದರ್ಶಿಬೇಕು. ಈ ಕೇಂದ್ರಗಳಲ್ಲಿ ಮತದಾರರಿಗೆ ಇರುವ ಗೊಂದಲಗಳನ್ನು ನಿವಾರಿಸುವ ಮತ್ತು ಅಗತ್ಯ ಮಾಹಿತಿಗಳಾದ ಮತದಾರರ ಸೇರ್ಪಡೆ, ವರ್ಗಾವಣೆ, ತಿದ್ದುಪಡಿ ಮಾಹಿತಿಗಳನ್ನ ಒದಗಿಬೇಕು ಎಂದರು.
ಯುವ ಜನರಲ್ಲಿ ಜಾಗೃತಿ ಮೂಡಿಸಲು ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್​ಗಳನ್ನು ಸ್ಥಾಪಿಸಲು ಎಲ್ಲ ಮುಖ್ಯೋಪಾಧ್ಯರು ಹಾಗೂ ಪ್ರಾಂಶುಪಾಲುರು ಕ್ರಮ ವಹಿಸಬೇಕು. ಇವುಗಳ ಮೂಲಕ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮತದಾರರ ನೋಂದಣಿ ಪ್ರಕ್ರಿಯೆಯ ಅರಿವು ಮೂಡಿಸಬೇಕು ಎಂದರು.
ಜಿಪಂ ಯೋಜನಾ ನಿರ್ದೇಶಕ ಎಚ್​.ಎನ್​.ಮಂಜುನಾಥ್​ಸ್ವಾಮಿ, ಮುಖ್ಯ ಲೆಕ್ಕಾಧಿಕಾರಿಗಳಾದ ರೆಡ್ಡಿ, ಮುಖ್ಯ ಯೋಜನಾಧಿಕಾರಿ ರವಿಚಂದ್ರನ್​, ಸಹಾಯಕ ಕಾರ್ಯದರ್ಶಿಗಳಾದ ವಿ. ವೆಂಕಟಾಚಲಪತಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net