ನೀರಿನ ಸಮಸ್ಯೆ ಆಗದಂತೆ ಕ್ರಮಕೈಗೊಳ್ಳಿ

ಹುಮನಾಬಾದ್​ನ ಶಾಸಕರ ಕಚೇರಿಯಲ್ಲಿ ಸೋಮವಾರ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್​ ಅಧಿಕಾರಿಗಳ  ಸಭೆ ನಡೆಸಿದರು. ತಹಸೀಲ್ದಾರ್​ರಾದ ಅಂಜುಮ್​ ತಬಸ್ಸುಮ್​, ಮಂಜುನಾಥ ಪಂಚಾಳ, ತಾಪಂ ಇಒ ಲಕ್ಷಿ$್ಮ ಬಿರಾದಾರ ಇತರರಿದ್ದರು.
ಹುಮನಾಬಾದ್​ನ ಶಾಸಕರ ಕಚೇರಿಯಲ್ಲಿ ಸೋಮವಾರ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್​ ಅಧಿಕಾರಿಗಳ ಸಭೆ ನಡೆಸಿದರು. ತಹಸೀಲ್ದಾರ್​ರಾದ ಅಂಜುಮ್​ ತಬಸ್ಸುಮ್​, ಮಂಜುನಾಥ ಪಂಚಾಳ, ತಾಪಂ ಇಒ ಲಕ್ಷಿ$್ಮ ಬಿರಾದಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್​ ಸೂಚನೆ
  • ಹುಮನಾಬಾದ್​ನಲ್ಲಿ ಅಧಿಕಾರಿಗಳ ಸಭೆ
ಹುಮನಾಬಾದ್​
ಬೇಸಿಗೆ ಇರುವುದರಿಂದ ೇತ್ರದ ವ್ಯಾಪ್ತಿಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ಹಾಗೂ ಸಾರ್ವಜನಿಕರ ತೊಂದರೆಗಳನ್ನು ತಡೆಯಲು ಅಧಿಕಾರಿಗಳು ತುರ್ತು ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್​ ಸೂಚಿಸಿದರು.
ಪಟ್ಟಣದ ಶಾಸಕರ ಆಡಳಿತ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ತಾಲೂಕು ಆಡಳಿತ ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ವಹಿಸುವ ಮೂಲಕ ಸದಾ ಸನ್ನದ್ದರಾಗಿರಬೇಕು. ಈ ನಿಟ್ಟಿನಲ್ಲಿ ರ್ನಿಲಕ್ಷ ವಹಿಸುವವರ ವಿರುದ್ಧ ಮೂಲಾಜಿಲ್ಲದೆ ಕ್ರಮ ವಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಪಂಪ್​ ಆಪರೇಟರ್​ ಕೊರತೆಯಿಂದ ನೀರಿನ ಸರಬರಾಜು ವ್ಯತ್ಯಯವಾಗುತ್ತಿರುವ ಬಗ್ಗೆ ದೂರುಗಳಿದ್ದು, ಅಗತ್ಯ ಸಿಬ್ಬಂದಿ ನೇಮಕಕ್ಕೆ ತಣ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದರು.
ಬೇಸಿಗೆ ಹಿನ್ನೆಲೆಯಲ್ಲಿ ಬಾಡಿಗೆ ಬೋರ್​ವೆಲ್​, ಟ್ಯಾಂಕರ್​ ಮೂಲಕ ನೀರು ಪೂರೈಕೆ, ಆರ್​ಒ ಪ್ಲಾಂಟ್​ಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಲಜೀವನ್​ ಮಿಷನ್​ ಕಾಮಗಾರಿಗಳನ್ನು ಶ್ರೀ ಪೂರ್ಣಗೊಳಿಸಲು ಅಧಿಕಾರಿಗಳು ಗಂಭೀರವಾಗಿ ಕ್ರಮವಹಿಸಬೇಕು. ಪಂಪ್​ಸೆಟ್​ಗಳಿಗೆ ನಿರಂತರ ವಿದ್ಯುತ್​ ಸರಬರಾಜು ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ತಹಸೀಲ್ದಾರ್​ ಅಂಜುಮ್​ ತಬಸ್ಸುಮ್​, ತಾಪಂ ಇಒ ಲಕ್ಷಿ$್ಮ ಬಿರಾದಾರ, ಚಿಟಗುಪ್ಪ ತಹಸೀಲ್ದಾರ್​ ಮಂಜುನಾಥ ಪಂಚಾಳ, ಬಸವಕಲ್ಯಾಣ ತಹಸೀಲ್ದಾರ್​ ಸೇರಿ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒಗಳು ಇದ್ದರು.
"

ಕ್ಷೇತ್ರದ ಜನತೆಗೆ ಅಧಿಕಾರಿಗಳು ಸರಿಯಾದ ಸಮಯದಲ್ಲಿ ಸಿಗದೆ ಸುಳ್ಳು ಹೇಳುತ್ತಾ ತಮ್ಮ ಕಚೇರಿಗೆ ಸುತ್ತಾಡಿಸಿಕೊಳ್ಳುವುದು ನನ್ನ ಗಮನಕ್ಕೆ ಬಂದಿದ್ದು, ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net