ಗುಂಡ್ಲುಪೇಟೆ: ವಿದ್ಯಾರ್ಥಿಗಳಲ್ಲಿ ಕಲಿಕೆ ಜತೆಗೆ ಅವರಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಸರ್ಕಾರ ಶಿಕ್ಷಣ ಇಲಾಖೆಯ ಮೂಲಕ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತಿದ್ದು, ಮಕ್ಕಳು ಇದನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಆಯೋಜಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಲ್ಲಿರುವ ಸಂಕೋಚವನ್ನು ನಿವಾರಿಸುವ ಜತೆಗೆ ಅವರಲ್ಲಿ ಹುದುಗಿರುವ ಪ್ರತಿಭೆಗಳನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಪ್ರದರ್ಶಿಸುವ ಅವಕಾಶ ದೊರಕುತ್ತಿದೆ ಎಂದರು.
ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಕೆ.ಸಿ.ಸತೀಶ್, ಬಿಆರ್‌ಸಿ ಡಾ.ಸರೋಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಪ್ರಸಾದ್, ರವೀಂದ್ರ, ರುದ್ರಸ್ವಾಮಿ, ಕೆ.ಎಸ್.ಮಂಜುನಾಥ್, ಅನ್ನಪೂರ್ಣಮ್ಮ, ದಿನೇಶ್, ಶಿವಯ್ಯ, ಮಹೇಶ್, ರವಿ, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಹಾಪ್ ಕಾಮ್ಸ್ ನಿರ್ದೇಶಕ ನೀಲಕಂಠಪ್ಪ, ಪುರಸಭೆ ಮಾಜಿ ಸದಸ್ಯ ರಾಜಗೋಪಾಲ ಇತರರು ಇದ್ದರು.