ಕಂಪ್ಯೂಟರ್ ಶಿಕ್ಷಕ, ಪ್ರಾಥಮಿಕ ಶಾಲಾ ಶಿಕ್ಷಕ, ಪದವೀಧರ ಪ್ರಾಥಮಿಕ ಶಿಕ್ಷಕ, ಪ್ರೌಢಶಾಲಾ ಶಿಕ್ಷಕ ವೃಂದ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ವೃಂದದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಒಂದೇ ಅರ್ಜಿಯಲ್ಲಿ ಎಲ್ಲ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸುವವರು ಯಾವ ಹುದ್ದೆಗೆ ಆಯ್ಕೆಯಾಗಲು ಬಯಸುತ್ತಾರೋ ಅಂತಹ ವೃಂದದ ಹುದ್ದೆಯ ತಾತ್ಕಾಲಿಕ ಆದ್ಯತೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಜಿಲ್ಲೆಯ ಆದ್ಯತೆಯನ್ನು ಸಹ ನಮೂದಿಸಬೇಕು.