Teacher Recruitment: ಶಿಕ್ಷಕರ ನೇಮಕಾತಿ: ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಅರ್ಜಿ ಸಲ್ಲಿಸಲು ಅ.26 ಕೊನೇ ದಿನ

ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಅ.26ರವರೆಗೆ ಸಮಯ ನೀಡಲಾಗಿದ್ದು, ಶುಲ್ಕ ಪಾವತಿಸಲು ಅ.28 ಕೊನೆಯ ದಿನವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
Teacher Recruitment: Revised schedule announced
ಶಿಕ್ಷಕರ ನೇಮಕಾತಿ: ಪರಿಷ್ಕೃತ ವೇಳಾಪಟ್ಟಿ ಪ್ರಕಟAI
Published on

ಬೆಂಗಳೂರು: ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಒಂದು ತಿಂಗಳ ಸಮಯವನ್ನು ವಿಸ್ತರಿಸಲಾಗಿದೆ ಮತ್ತು ಅಕ್ಟೋಬರ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ನವೆಂಬರ್/ಡಿಸೆಂಬರ್‌ಗೆ ಮುಂದೂಡಿರುವ ಶಾಲಾ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಅ.26ರವರೆಗೆ ಸಮಯ ನೀಡಲಾಗಿದ್ದು, ಶುಲ್ಕ ಪಾವತಿಸಲು ಅ.28 ಕೊನೆಯ ದಿನವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾಗಿದ್ದ ಪರೀಕ್ಷೆ ನಡೆಸುವ ದಿನಾಂಕವನ್ನು ಕೂಡ ಮುಂದೂಡಲಾಗಿದೆ. ಇದೇ ವರ್ಷದ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ವೇಳಾಪಟ್ಟಿಯನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರು ಮತ್ತು ನೇಮಕಾತಿ ಪ್ರಾಧಿಕಾರಗಳಿಂದ ಪಡೆಯಬಬಹುದು ಎಂದು ತಿಳಿಸಿದೆ.

ಆಗಸ್ಟ್ 12ರಂದು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದ ಶಾಲಾ ಶಿಕ್ಷಣ ಇಲಾಖೆಯು ಆ.18ರಿಂದ ಸೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ನೀಡಿದ್ದರಿಂದ ಸಮಯ ವಿಸ್ತರಿಸಲಾಗಿತ್ತು. ಈಗ ಎರಡನೇ ಬಾರಿಗೆ ಅವಧಿಯನ್ನು ವಿಸ್ತರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net