ಶಿಕ್ಷಕರು, ಪಾಲಕರು ಮಕ್ಕಳ ಬೆಳವಣಿಗೆಗೆ ಶ್ರಮಿಸಲಿ children

ಶಿಕ್ಷಕರು, ಪಾಲಕರು ಮಕ್ಕಳ ಬೆಳವಣಿಗೆಗೆ ಶ್ರಮಿಸಲಿ children
ಶಿಕ್ಷಕರು, ಪಾಲಕರು ಮಕ್ಕಳ ಬೆಳವಣಿಗೆಗೆ ಶ್ರಮಿಸಲಿ children
Published on
ಪಾತಪಾಳ್ಯ: ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಪಠ್ಯದ ಜತೆಗೆ ಪಠ್ಯೆತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಶಿಕ್ಷಕ ಎನ್​.ಈಶ್ವರಾಚಾರಿ ತಿಳಿಸಿದರು.children
ನಾರೇದ್ದೇಪಲ್ಲಿ ಶ್ರೀವಿನಾಯಕ ಪ್ರೌಢಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಶಿಸ್ತು, ಸಂಯಮ ರೂಢಿಸಿಕೊಂಡು ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಕರು, ಪಾಲಕರು ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾಗಿ ಶ್ರಮಿಸಬೇಕು. ಶಿಕ್ಷಕರು ನಿಗದಿತ ಅವಧಿಯಲ್ಲಿ ಪಠ್ಯ ಕ್ರಮ ಪೂರ್ಣಗೊಳಿಸುವುದರ ಜತೆಗೆ ವಿದ್ಯಾರ್ಥಿಗಳಿಗೆ ಸರಳ ಬೋಧನಾ ಪದ್ಧತಿ ರೂಢಿಸಿಕೊಳ್ಳಬೇಕು ಎಂದರು.
ಶಿಕ್ಷಕ ಮುನಿಕೃಷ್ಣಪ್ಪ ಮಾತನಾಡಿ, ಪ್ರಸ್ತುತ ವಿದ್ಯಾರ್ಥಿಗಳು ಟಿವಿ, ಮೊಬೈಲ್​ಗಳಿಗೆ ಆಕರ್ಷಿತರಾಗಿ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಇದರ ಕುರಿತು ಪಾಲಕರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಮೊಬೈಲ್​ಗಳು ಪ್ರತಿಷ್ಠೆಯ ವಸ್ತುಗಳಾಗಿದ್ದು, ಅವುಗಳ ಆಕರ್ಷಣೆಗೆ ಒಳಗಾಗುವ ಮಕ್ಕಳು ಅದರಲ್ಲೇ ತಲೀನರಾಗುವ ಮೂಲಕ ಓದಿನ ಜತೆಗೆ ಸರಿಯಾಗಿ ಆಹಾರ ಸೇವಿಸುವುದಿಲ್ಲ. ಇದರಿಂದ ಮಕ್ಕಳಲ್ಲಿ ಅನಾರೋಗ್ಯ ಉಂಟಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ಎಂ.ಸುಧಾಕರರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ರ್ನಿದಿಷ್ಟ ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಅಧ್ಯಯನ ಮಾಡಿ ಉತ್ತಮ ಫಲಿತಾಂಶ ಪಡೆಯಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net