ರಾಜ್ಯದ ಹಲವೆಡೆ ಸದ್ಯದಲ್ಲೇ 45 ಡಿ.ಸೆ. ಮುಟ್ಟಲಿದೆ ತಾಪಮಾನ-Heat wave

ಉಷ್ಣಾಂಶ 45 ಡಿ.ಸೆ.ಗೆ ಮುಟ್ಟುವ ನಿರೀಕ್ಷೆ
ಉಷ್ಣಾಂಶ 45 ಡಿ.ಸೆ.ಗೆ ಮುಟ್ಟುವ ನಿರೀಕ್ಷೆ
Published on
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ತಾಪದಿಂದ ಜನರು ಬಸವಳಿಯುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ 45 ಡಿ.ಸೆ.ಗೆ ಮುಟ್ಟುವ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಲಬುರಗಿ, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಗದಗ, ಹಾವೇರಿ, ಯಾದಗಿರಿ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರಸ್ತುತ 41-43 ಡಿ. ಸೆ. ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಗಾಳಿ ಬೀಸುವುದರಿಂದ ಏ.21ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಪ್ರಸ್ತುತ 35-36 ಡಿ.ಸೆ. ಉಷ್ಣಾಂಶ ದಾಖಲಾಗುತ್ತಿದ್ದು, ಬರುವ ದಿನಗಳಲ್ಲಿ ಇದು 40ರ ಸಮೀಪ ಬರಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗಿ ಬಿಸಿ ವಾತಾವರಣ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net