ದೇವಾಲಯ ನಿರ್ಮಾಣ ಆಧ್ಯಾತ್ಮಿಕಕ್ಕೆ ಕೊಟ್ಟ ಗೌರವ

ಮಳವಳ್ಳಿ ತಾಲೂಕಿನ ಅಮೃತೇಶ್ವರನಹಳ್ಳಿ ಕಾಲನಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ  ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿದರು. ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಷಡಕ್ಷರ ಸ್ವಾಮೀಜಿ, ಹನುಮಂತು, ನಂದಕುಮಾರ್, ಶ್ರೀಧರ, ಮಧು ಇದ್ದರು.
ಮಳವಳ್ಳಿ ತಾಲೂಕಿನ ಅಮೃತೇಶ್ವರನಹಳ್ಳಿ ಕಾಲನಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿದರು. ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಷಡಕ್ಷರ ಸ್ವಾಮೀಜಿ, ಹನುಮಂತು, ನಂದಕುಮಾರ್, ಶ್ರೀಧರ, ಮಧು ಇದ್ದರು.
Published on
ಮಳವಳ್ಳಿ: ಆಧುನಿಕ ವಿಜ್ಞಾನ, ತಂತ್ರಜ್ಞಾನ ಯುಗದಲ್ಲಿಯೂ ದೇವಸ್ಥಾನ ನಿರ್ಮಿಸಿ ಪೂಜಿಸುತ್ತಿರುವುದು ಆಧ್ಯಾತ್ಮಿಕಕ್ಕೆ ಕೊಟ್ಟ ಗೌರವವಾಗಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಅಮೃತೇಶ್ವರನಹಳ್ಳಿ ಕಾಲನಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಜೀರ್ಣೋದ್ಧಾರಗೊಳಿಸಿರುವ ಮಹಾಗಣಪತಿ ದೇವಾಲಯದ ಮರು ಪ್ರತಿಷ್ಠಾಪನೆ ಮತ್ತು ವಿಮಾನ ಗೋಪುರ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ನಿರ್ದಿಷ್ಟ ರೂಪವಿಲ್ಲದೇ ಸರ್ವವ್ಯಾಪ್ತಿಯಲ್ಲಿ ನೆಲೆಸಿ, ಸಕಲ ಶಕ್ತಿಯನ್ನು ಹೊಂದಿರುವ ದೇವರನ್ನು ಪೂಜಿಸಿದರೆ ಜೀವನದಲ್ಲಿ ನೆಮ್ಮದಿ ಕಾಣಬಹುದಾಗಿದೆ ಎಂದರು.
ಮನುಷ್ಯನ ಜನ್ಮವನ್ನು ಕೊಡುವುದರ ಜತೆಗೆ ಗಾಳಿ, ಬೆಳಕನ್ನು ನೀಡಿ ಜೀವಿಸಲು ಅನುವು ಮಾಡಿಕೊಟ್ಟಿರುವ ಭಗವಂತನನ್ನು ಪ್ರತಿಯೊಬ್ಬರು ಪೂಜಿಸಬೇಕಿದೆ. ಮೊದಲ ಪೂಜೆ ಗಣಪತಿಗೆ ಸಲ್ಲುತ್ತದೆ. ಗಣಪತಿಯನ್ನು ಪೂಜಿಸಿ ಪ್ರಾರ್ಥಿಸಿ ನಾಲ್ಕಾರು ಬಾರಿ ಮಂತ್ರವನ್ನು ಜಪಿಸಿದರೆ ವರ ಕೊಡುತ್ತೇನೆ ಎನ್ನುವು ನಂಬಿಕೆ ಭಕ್ತರಲ್ಲಿದೆ. ದೇವರ ಮಂತ್ರ, ಸಾನ್ನಿಧ್ಯವನ್ನು ಎಂದಿಗೂ ಮರೆಯಬಾರದು ಎಂದರು.
ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ದೇಶ ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದರೂ ಭವಿಷ್ಯದ ಪೀಳಿಗೆಗೆ ಇರಬೇಕಾದ ಧಾರ್ಮಿಕ ಪ್ರಜ್ಞೆ, ಸಂಸ್ಕೃತಿ, ಪರಂಪರೆಯನ್ನು ಪೂರ್ವಜರ ಹಾದಿಯಲ್ಲಿಯೇ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗುತ್ತಿರುವುದು ಉತ್ತಮ ಸಮಾಜ ನಿರ್ಮಾಣಕ್ಕೆ ಸಾಕ್ಷಿಯಾಗಿದೆ ಎಂದರು.
ಮಾಜಿ ಪ್ರಧಾನಿ ದೇವೇಗೌಡ ಅವರು ಇಳಿವಯಸ್ಸಿನಲ್ಲಿಯೂ ರಾಜ್ಯಸಭೆ ಸದಸ್ಯರಾಗಿದ್ದ ಅವಧಿಯ ಅವಕಾಶದಲ್ಲಿ ನೆಲ, ಜಲ, ಭಾಷೆಯ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಉತ್ತಮಸೇವೆ ಸಲ್ಲಿಸುತ್ತಿದ್ದಾರೆ. ಜನರು ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಸದಾ ಚಿರಋಣಿಯಾಗಿರುವುದಾಗಿ ಹೇಳಿದರು.
ವೇದಿಕೆಯಲ್ಲಿ ಡಿ.ಹಲಸಹಳ್ಳಿ ಗವಿಮಠದ ಶ್ರೀಷಡಕ್ಷರಿ ಸ್ವಾಮೀಜಿ, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜೆಡಿಎಸ್ ತಾಲೂಕು ಅಧ್ಯಕ್ಷ ಹನುಮಂತು, ಯುವ ಘಟಕದ ಅಧ್ಯಕ್ಷ ಚಂದಳ್ಳಿ ಶ್ರೀಧರ್, ಪುರಸಭೆ ಮಾಜಿ ಉಪಾಧ್ಯಕ್ಷ ಟಿ. ನಂದಕುಮಾರ್, ಯುವ ಮುಖಂಡ ಮಧು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net