ಟಿಇಟಿ: ಅಭ್ಯರ್ಥಿಗಳ ನೈಜತೆ ಪರಿಶೀಲನೆಗೆ ಬಯೋಮೆಟ್ರಿಕ್, ಮಹಿಳಾ ಅಭ್ಯರ್ಥಿಗಳು ಮೆಹಂದಿ ಹಚ್ಚಂಗಿಲ್ಲ

ಟಿಇಟಿ ಅಭ್ಯರ್ಥಿಗಳ ನೈಜತೆ ಪರಿಶೀಲನೆಗೆ ಬಯೋಮೆಟ್ರಿಕ್
ಟಿಇಟಿ ಅಭ್ಯರ್ಥಿಗಳ ನೈಜತೆ ಪರಿಶೀಲನೆಗೆ ಬಯೋಮೆಟ್ರಿಕ್
Published on

ಪ್ರಮುಖ ಮುಖ್ಯಾಂಶಗಳು

  • ಅಭ್ಯರ್ಥಿಗಳ ನೈಜತೆ ಪರಿಶೀಲಿಸಲು ಬಯೋಮೆಟ್ರಿಕ್ ಮತ್ತು ೇಸ್ ರೆಕಾಗ್ನಿಷನ್ ಮಾಡಲಾಗುತ್ತಿದೆ
  • ಡಿ.7ರಂದು ಟಿಇಟಿ ಪರೀಕ್ಷೆ ನಡೆಯುತ್ತಿದ್ದು, 3.35 ಲಕ್ಷ ಅಭ್ಯರ್ಥಿಗಳು ನೋಂದಣಿ
  • ಮಹಿಳಾ ಅಭ್ಯರ್ಥಿಗಳ ಬಯೋಮೆಟ್ರಿಕ್ ದಾಖಲಿಸಲು ಮೆಹಂದಿ, ಉಗುರು ಬಣ್ಣ (ನೈಲ್ ಪಾಲಿಷ್) ಹಚ್ಚದಂತೆ ಸೂಚಿಸಲಾಗಿದೆ.
ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಭ್ಯರ್ಥಿಗಳ ನೈಜತೆ ಪರಿಶೀಲಿಸಲು ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮತ್ತು ೇಸ್ ರೆಕಾಗ್ನಿಷನ್ ಮಾಡಲಾಗುತ್ತಿದೆ.
ಡಿ.7ರಂದು ಟಿಇಟಿ ಪರೀಕ್ಷೆ ನಡೆಯುತ್ತಿದ್ದು, ಬೆಳಗ್ಗೆ ಪತ್ರಿಕೆ-1 ಮತ್ತು ಮಧ್ಯಾಹ್ನ-2 ಪರೀಕ್ಷೆಗಳು ನಡೆಯಲಿವೆ. ಎರಡೂ ಪರೀಕ್ಷೆಗಳು ಸೇರಿ 3.35 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲಿ ಅಭ್ಯರ್ಥಿಗಳು ಹಾಜರಾಗುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆಯಿಂದ ತಾಂತ್ರಿಕವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರ ಅಂಗವಾಗಿ ಎಲ್ಲ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ನಡೆಸುವ ಮೆಟಲ್ ಡಿಟೆಕ್ಟರ್ ತಪಾಸಣೆ, ಡಿಜಿಟಲ್ ಬೆರಳಚ್ಚು ದಾಖಲಿಸುವಿಕೆ ಮತ್ತು ಮುಖ ಗುರುತಿಸುವಿಕೆಯ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಮೂಲ ಗುರುತಿಸ ಚೀಟಿಯೊಂದಿಗೆ ಹಾಜರಾಗುವಂತೆ ಸೂಚನೆ ನೀಡಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಕೂಡಲೇ ಬಯೋಮೆಟ್ರಿಕ್ ಸಾಧನದ ಮೂಲಕ ಬೆರಳಚ್ಚು ದಾಖಲಿಸಬೇಕು. ಈ ಕಾರಣದಿಂದ ಮೆಹಂದಿ, ಉಗುರು ಬಣ್ಣ (ನೈಲ್ ಪಾಲಿಷ್) ಇತ್ಯಾದಿಗಳನ್ನು ಹಚ್ಚದಂತೆ ಸೂಚಿಸಲಾಗಿದೆ.
ಪರೀಕ್ಷೆಯನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲಾಗುತ್ತದೆ. ನಿಗದಿತ ಸಮಯದ ನಂತರ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರವೇಶ ಕಲ್ಪಿಸುವುದಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯದಂತೆ ತಿಳಿಸಲಾಗಿದೆ.

903 ಕೇಂದ್ರಗಳಲ್ಲಿ ಪರೀಕ್ಷೆ

ರಾಜ್ಯಾದ್ಯಂತ 903 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಸಂಬಂಧ ಕೊಠಡಿ ಮೇಲ್ವಿಚಾರಕರು ಸೇರಿ ಸಿಬ್ಬಂದಿ ನೇಮಕ ಹಾಗೂ ಪ್ರಶ್ನೆಪತ್ರಿಕೆ ಸರಬರಾಜು ಮಾಡಲು ಈಗಾಗಲೇ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಇಲಾಖೆ ಆಯುಕ್ತರು ಮತ್ತು ಆಯಾ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net