ಗಮನ ಸೆಳೆದ ಹೋರಾಟಗಾರರ ವೇಷ ಭೂಷಣ

ಕುದೂರಿನ ಶ್ರೀ ರಾಮಲೀಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಬಲ ವಾದಕ ಗಂಗಮುನಿಯಪ್ಪ, ಪಿಡಿಒ ಸತೀಶ್, ಕಾರ್ಯದರ್ಶಿ ವೆಂಕಟೇಶ್, ಗ್ರಾಪಂ ಮಾಜಿ ಸದಸ್ಯರಾದ ಕೆ.ಬಿ ಬಾಲರಾಜು, ಕೆ.ಟಿ.ವೆಂಕಟೇಶ್, ಹನುಮಂತರಾಯಪ್ಪ, ಹೊನ್ನರಾಜು, ಸಾಬೀರ್ ಪಾಷಾ, ವರ್ತಕರ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಇತರರು ಇದ್ದರು.

Published on

ಎದೆಯೊಳಗೆ ದೇಶ, ದೇಶಾಭಿಮಾನ ಇದ್ದಾಗ ಮಾತ್ರ ಸ್ವಾತಂತ್ರ್ಯ ಪದಕ್ಕೆ ಪರಿಪೂರ್ಣ ಅರ್ಥ ಬರುತ್ತದೆ ಎಂದು ಹಿರಿಯ ತಬಲ ವಾದಕ ಗಂಗಮುನಿಯಪ್ಪ ಕಿವಿಮಾತು ಹೇಳಿದರು.

ಶ್ರೀ ರಾಮಲೀಲಾ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ಮಹನೀಯರ ಹೋರಾಟ, ತ್ಯಾಗ, ಬಲಿದಾನಗಳನ್ನು ವಿದ್ಯಾರ್ಥಿಗಳು ಅರಿಯಬೇಕು. ವಿದ್ಯಾರ್ಥಿ ದೆಸೆಯಲ್ಲಿ ದೇಶಭಕ್ತಿ ಭಾವನೆ ಬೆಳೆಸಿಕೊಳ್ಳಬೇಕೆಂದು ಪಿಡಿಒ ಸತೀಶ್ ತಿಳಿಸಿದರು.
ಸಾವಿರಾರು ಮಕ್ಕಳು ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು. ಹಲವರು ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಧರಿಸಿ ಗಮನ ಸೆಳೆದರು. ವೇದಿಕೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ಶಿಸ್ತು, ಪಥ ಸಂಚಲನ, ಡ್ರಮ್ಸೆಟ್, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾಲೆಗಳಿಗೆ ಬಹುಮಾನ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net