ಅರ್ಜಿದಾರರ ಪರ ವಾದಿಸಿದ್ದ ವಕೀಲರು, ಕೋರಮಂಗಲದ ಸರ್ವೇ ನಂ.12ರಲ್ಲಿರುವ ಸುಮಾರು 1.30 ಎಕರೆ ಜಮೀನನ್ನು ಹಲವು ದಶಕಗಳಿಂದ ಶಾಲಾ ಮಕ್ಕಳು ಮತ್ತು ಸ್ಥಳಿಯರು ಆಟದ ಮೈದಾನವಾಗಿ ಬಳಸುತ್ತಿದ್ದರು. ಅದನ್ನು ಅತಿಕ್ರಮಣ ಮಾಡಿಕೊಂಡಿರುವ ಕೇಂದ್ರ ಸರ್ಕಾರ, ಅಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ನಿರ್ಮಿಸುತ್ತಿದೆ. ಕಾಂಪೌಂಡ್ ನಿರ್ಮಿಸಿ ಸಾರ್ವಜನಿಕರ ಪ್ರವೇಶ ತಡೆಯುತ್ತಿದೆ. ಕೇಂದ್ರ ಸರ್ಕಾರಕ್ಕೆ ಮಂಜೂರಾದ ಜಾಗ ಪ್ರಸ್ತುತ ಸ್ಥಳದಿಂದ 1.5 ಕಿ.ಮೀ ದೂರದಲ್ಲಿದೆ ಎಂದು ಆಕ್ಷೇಪಣೆ ಸಲ್ಲಿಸಿದ್ದರು.