ಕೋಲಾರ: ರೈತರು ಉತ್ಪಾದಿಸುತ್ತಿರುವ ಹಣ್ಣು, ತರಕಾರಿಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ದೊರೆಯದೆ ಕಂಗಾಲಾಗಿದ್ದಾರೆ. ಮಳೆ ಕೊರತೆ ಎದುರಾಗಿ ಬರ ಪರಿಸ್ಥಿತಿ ಎದುರಾಗುವ ಮುನ್ಸೂಚನೆಯಿದ್ದು, ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.