ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸುವಲ್ಲಿ ಕೇಂದ್ರ ವಿಫಲ

ರಬಕವಿ-ಬನಹಟ್ಟಿ ನಗರದಲ್ಲಿ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಗ್ರೇಡ್-2 ತಹಸೀಲ್ದಾರ ಸತೀಶ ಕುಮಾರ ಅವರಿಗೆ ಮನವಿ ಸಲ್ಲಿಸಿದರು. ರಮೇಶ ಸೊರಗಾಂವಿ, ಗಂಗಪ್ಪ ಒಂಟಗುಡಿ, ರಾಜೇಂದ್ರ ಮಿರ್ಜಿ ಇದ್ದರು.
ರಬಕವಿ-ಬನಹಟ್ಟಿ ನಗರದಲ್ಲಿ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಗ್ರೇಡ್-2 ತಹಸೀಲ್ದಾರ ಸತೀಶ ಕುಮಾರ ಅವರಿಗೆ ಮನವಿ ಸಲ್ಲಿಸಿದರು. ರಮೇಶ ಸೊರಗಾಂವಿ, ಗಂಗಪ್ಪ ಒಂಟಗುಡಿ, ರಾಜೇಂದ್ರ ಮಿರ್ಜಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಶ್ನೆ ಪತ್ರಿಕೆ ಸೋರಿಕೆ ಖಂಡನೆ
  • ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
ರಬಕವಿ-ಬನಹಟ್ಟಿ: ನೀಟ್ ಹಾಗೂ ಸಿಬಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿಯುವಂತಾಗಿದೆ ಎಂದು ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಆರೋಪಿಸಿದರು.
ರಬಕವಿ-ಬನಹಟ್ಟಿ ತಾಲೂಕು ಕಚೇರಿಗೆ ಶನಿವಾರ ತೆರಳಿ ಕೆಲಹೊತ್ತು ಪ್ರತಿಭಟಿಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು. ದೇಶದಲ್ಲಿ ಶಿಕ್ಷಣ ಕ್ಷೇತ್ರವು ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಯುತ್ತಿದೆ ಎಂದು ದೂರಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಇಂತಹ ಘಟನೆಗಳ ಪರಿಣಾಮವಾಗಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣರಾಗಿದ್ದಾರೆ.
ವಿದ್ಯಾರ್ಥಿಗಳ ಜೀವನ ಮತ್ತು ಭವಿಷ್ಯ ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಪ್ರಕರಣ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕ ಮತ್ತು ವಿಶ್ವಾಸಾರ್ಹತೆಯನ್ನು ಪುನಃ ಸ್ಥಾಪಿಸಲು ಕೇಂದ್ರ ಸರ್ಕಾರ ಅಗತ್ಯ ಸುಧಾರಣೆ ತರಬೇಕು. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಗೌರವ ದೊರೆಯುವಂತಾಗಬೇಕು ಎಂದು ಆಗ್ರಹಿಸಿದರು.
ರಮೇಶ ಸೊರಗಾಂವಿ, ಗಂಗಪ್ಪ ಒಂಟಗೂಡಿ, ಸಂಗಪ್ಪ ಉದಗಟ್ಟಿ, ರಾಜೇಂದ್ರ ಮಿರ್ಜಿ, ಬಸವರಾಜ ಜಮಖಂಡಿ, ಕುಭೇರ ಸಾರವಾಡ, ರಮೇಶ ಬಸಪ್ಪಗೋಳ, ಶಿವಾನಂದ ಬಸಪ್ಪಗೋಳ, ಈರಪ್ಪ ಮಡಿವಾಳ ಸೇರಿ ಅನೇಕರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net