ಕಲಬುರಗಿ: ಸಮಾಜದ ಪ್ರಗತಿಗೆ ಶಿಕ್ಷಣ ಅತ್ಯಂತ ಪ್ರಮುಖ ಸಾಧನವಾಗಿದ್ದು, ಎಲ್ಲರೂ ಕಡ್ಡಾಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು.
ಜೇವರ್ಗಿ ರಸ್ತೆಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಸವಿತಾ ಸಮಾಜ ಸರ್ಕಾರಿ, ಅರೆಸರ್ಕಾರಿ ನೌಕರರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸರ್ಕಾರಿ ಸೇವೆಗೆ ಸೇರ್ಪಡೆಯಾದವರು, ನಿವೃತ್ತ ಸರ್ಕಾರಿ ನೌಕರರಿಗೆ ಸತ್ಕಾರ ಸಮಾರಂಭದಲ್ಲಿ ಮಾತನಾಡಿ, ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವ ಮೂಲಕ ಮುಂದಿನ ಪೀಳಿಗೆಗೆ ಪ್ರೇರಣೆ ನೀಡುವ ಕಾರ್ಯ ಸಂವು ನಿರಂತರವಾಗಿ ನಡೆಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ತೆಗಲತಿಪ್ಪಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿ. ಯುವಕರು ಶಿಕ್ಷಣದೊಂದಿಗೆ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಾ.ಜಗನ್ನಾಥ ತರನಳ್ಳಿ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಕುರಿಹಾಳ ಅಧ್ಯಕ್ಷತೆ ವಹಿಸಿದ್ದರು.
ಪ್ರಕಾಶ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು. ಪೂರ್ಣಿಮಾ ಆರ್. ಸೂರ್ಯವಂಶಿ ಪ್ರಾರ್ಥಿಸಿದರು. ಡಾ.ಶೇಷರಾವ ಚಿಕಲಿಕರ್ ಸ್ವಾಗತಿಸಿದರು. ದೇವಿದಾಸ ಜಹೀರಾಬಾದಕರ್ ಪ್ರಾಸ್ತಾವಿಕ ಮಾತನಾಡಿದರು. ಶ್ರೀನಿವಾಸ ನಾಲವಾರ ನಿರೂಪಣೆ ಮಾಡಿದರು. ಗಿರಿಜಾಶಂಕರ ಗೋಗಿ ವಂದಿಸಿದರು.