ನೆಲಜಿ ಗ್ರಾಮದಲ್ಲಿನ ರಸ್ತೆಗಳ ಸ್ಥಿತಿ ಅಯೋಮಯ

ನೆಲಜಿ ಗ್ರಾಮದ ಮೇದರ ಕಾಲನಿ, ಕುಂಬೇರ ಹಾಗೂ ಮಾಚಿಕಂಡ ಕುಟುಂಬಸ್ಥರ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸ್ಥಿತಿ.
ನೆಲಜಿ ಗ್ರಾಮದ ಮೇದರ ಕಾಲನಿ, ಕುಂಬೇರ ಹಾಗೂ ಮಾಚಿಕಂಡ ಕುಟುಂಬಸ್ಥರ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸ್ಥಿತಿ.
Published on

ಪ್ರಮುಖ ಮುಖ್ಯಾಂಶಗಳು

  • ನೆಲಜಿ ಗ್ರಾಮ
  • ಸಂಪರ್ಕ ಕಲ್ಪಿಸುವ ರಸ್ತೆಗಳು ದುಸ್ಥಿತಿ

ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಸಂಪರ್ಕ ಕಲ್ಪಿಸುವ ರಸ್ತೆಗಳು ದುಸ್ಥಿತಿ ತಲುಪಿದ್ದು, ಸ್ಥಳೀಯರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ.

ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಜಿ ಗ್ರಾಮದಲ್ಲಿನ ರಸ್ತೆ ಕೆಸರುಮಯವಾಗಿದ್ದು ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ಮೇದರ ಕಾಲನಿ, ತುಟಬೇರ ಹಾಗೂ ಮಾಚಿಕಂಡ ಕುಟುಂಬಸ್ಥರ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವವರ ಪಾಡು ಹೇಳತೀರದಾಗಿದೆ.
ಕೆಸರುಮಯ ರಸ್ತೆಯಲ್ಲಿ ಗ್ರಾಮಸ್ಥರು ಮಕ್ಕಳನ್ನು ಹೊತ್ತುಕೊಂಡು ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ. ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿದ್ದು ಆಟೋ ಚಾಲಕರು ಸಂಜೆ ವೇಳೆಯಲ್ಲಿ ಈ ಭಾಗಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಜತೆಗೆ ಕೆಸರಮಯ ರಸ್ತೆಯಲ್ಲಿ ವಾಹನಗಳು ಮುಂದೆ ಸಾಗುವುದಿಲ್ಲ. ಇದರಿಂದ ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು ರಸ್ತೆ ದುರಸ್ತಿಗೆ ಮುಂದಾಗುವ ಮೂಲಕ ಜನರ ಬವಣೆಯನ್ನು ಪರಿಹರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ರಸ್ತೆ ಅಭಿವೃದ್ಧಿಗೆ ಶಾಸಕರ ಅನುದಾನದಿಂದ ಎಸ್‌ಸಿ-ಎಸ್‌ಟಿ ಕೋಟಾದಲ್ಲಿ ಅನುದಾನ ಮಂಜೂರಾಗಿದ್ದು, ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಆರಂಭವಾಗಲಿದೆ. ಆ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬಲ್ಲಮಾವಟ್ಟಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net