ಅರಿವು ಕಾರ್ಯಕ್ರಮದ ಉದ್ದೇಶದ ಕುರಿತು ಕಾವೇರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಎಚ್.ಎನ್.ದೇವರಾಜ್ ಮಾತನಾಡಿ, ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ತರುವಂತಹ ಮತದಾನದ ಹಕ್ಕನ್ನು ನಮ್ಮ ದೇಶದ ಸಂವಿಧಾನ ನೀಡಿದೆ. ಅಮೂಲ್ಯವಾದ ಹಕ್ಕನ್ನು ಪಡೆಯಬೇಕಾದರೆ ಮತದಾರರ ಪಟ್ಟಿಯಲ್ಲಿ ಮತದಾರನ ಹೆಸರು ಇರಬೇಕು. ಆದರೆ ಈ ಹಕ್ಕು ಕೆಲವೊಮ್ಮೆ ದುರ್ಬಳಕೆಯಾಗುತ್ತದೆ. ಇದನ್ನು ತಡೆದು ನಿಜವಾದ ಪೌರತ್ವ ಪಡೆದಿರುವವರನ್ನು ಗುರುತಿಸಿ ನಕಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರ ಈ ವಿಶೇಷ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾಲೇಜು ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.