ಸಾನ್ನಿಧ್ಯ ವಹಿಸಿದ್ದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಸುಂದರ ಮತ್ತು ಸದೃಢ ಸಮಾಜ ನಿಮಾರ್ಣದಲ್ಲಿ ಮಠ ಮಾನ್ಯಗಳ ಕೊಡುಗೆ ದೊಡ್ಡದಿದೆ. ಧಾರ್ಮಿಕ, ಕೃಷಿ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮಠಗಳು ವಿಶಿಷ್ಟ ಸೇವೆ ಸಲ್ಲಿಸುತ್ತಿವೆ. ಅದರಲ್ಲಿ ಇಳಕಲ್ನ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಜನಪರ ಮತ್ತು ಜೀವಪರ ಸೇವೆ ಮಾದರಿಯಾಗಿದೆ ಎಂದರು.