

ಪ್ರಮುಖ ಮುಖ್ಯಾಂಶಗಳು
ಕಾಮಗಾರಿ ವಿಳಂಬ ಕುರಿತು ಪರಿಶೀಲಿಸಿ ಈಗಾಗಲೇ ಗುತ್ತಿಗೆದಾರನಿಗೆ ನೋಟಿಸ್ ಜಾರಿ ಮಾಡಲಾಗಿದೆ. ನಿಗದಿತ ಅವಧಿಯೊಳಗೆ ಕೆಲಸ ಪೂರ್ಣಗೊಳಿಸದಿದ್ದರೆ ಕಪು$್ಪ ಪಟ್ಟಿಗೆ ಸೇರಿಸಲು ಕ್ರಮವಹಿಸಲಾಗುವುದು.
ಕಳೆದ ಎರಡ್ಮೂರು ತಿಂಗಳಿಂದ ಕೆಲಸ ನಿಂತು ಹೋಗಿದೆ. ಸಾರ್ವಜನಿಕರು ಸಂಚರಿಸಲು ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖಾಧಿಖಾರಿಗಳು ಕೆಲಸ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು.
ಪಟ್ಟಣದಲ್ಲಿನ ರಸ್ತೆಗಳು ಕಿರಿದಾಗಿವೆ. ಕೆಲವರು ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದಾರೆ. ಅದನ್ನು ತೆರವುಗೊಳಿಸಬೇಕು.