ಪಿಂಚಣಿ ಯೋಜನೆಗಳಡಿ 81.88 ಲಕ್ಷ ಫಲಾನುಭವಿಗಳಿದ್ದು, ತಿಂಗಳಿಗೆ 894 ಕೋಟಿ ರೂ. ನೀಡಬೇಕಿದೆ. ಪ್ರತಿ ವರ್ಷ ಬಜೆಟ್‌ನಲ್ಲಿ 10,736 ಕೋಟಿ ರೂ. ಮೀಸಲಿಟ್ಟರೂ ಫಲಾನುಭವಿಗಳಿಗೆ ತಲುಪಿಲ್ಲ. ವೃದ್ಧಾಪ್ಯ, ವಿಧವಾ, ಸಂಧ್ಯಾ ಸುರಕ್ಷಾ, ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡುವ ಸಹಾಯಧನ ಮೊದಲಾದವು ಬಾಕಿ ಇವೆ. ಅನಾಥ ಮಕ್ಕಳ 73 ಕೋಟಿ ರೂ. ಅನುದಾನವೂ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ 45 ಸಾವಿರ ಕೋಟಿ ರೂ. ಲೂಟಿಯಾಗಿದೆ. ಸಮೀಕ್ಷೆಯ ಹೆಸರಲ್ಲಿ ರೈತರಿಗೆ ಪರಿಹಾರ ಕೊಟ್ಟಿಲ್ಲ ಎಂದು ಆರೋಪಿಸಿದರು.