pressmeet ಪಾವಗಡ ತಾಲೂಕಿನ ನಿರೀಕ್ಷಣಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಕೂಕು ಅಧ್ಯಕ್ಷ ಎನ್.ಎ.ಈರಣ್ಣ, ಯುವ ಘಟಕ ಅಧ್ಯಕ್ಷ ಭರತ್ ಯಾದವ್, ವದನಕಲ್ಲು ಪಾಲಯ್ಯ, ಜಯಶೀಲ ರೆಡ್ಡಿ ಇದ್ದರು.
Published on:
Copied
Follow Us
ಪಾವಗಡ: ವಿಧವಾವೇತನ, ವೃದ್ಧಾಪ್ಯವೇತನ ಹಾಗೂ ಅಂಗವಿಕಲ ಸೇರಿ ಸಾಮಾಜಿಕ pressmeet ಭದ್ರತಾ ಯೋಜನೆಯ ಫಲಾನುಭವಿಗಳಿಗೆ 6 ತಿಂಗಳಿಂದ ಮಾಸಾಶನ ನೀಡಿಲ್ಲ ಎಂದು ಮಾಜಿ ಶಾಸಕ ಕೆ.ಎಂ ತಿಮ್ಮರಾಯಪ್ಪ ಆರೋಪಿಸಿದರು.
ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಕಳೆದ 6 ತಿಂಗಳಿಂದ ಈ ಫಲಾನುಭವಿಗಳಿಗೆ ಮಾಸಾಶನ ನೀಡಲು ಸರ್ಕಾರದಲ್ಲಿ ಹಣ ಇಲ್ಲದೆ ದಿವಾಳಿಯಾಗಿದೆ. ತಾಲೂಕಿನಲ್ಲಿ ಸುಮಾರು 60 ಸಾವಿರ ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವವರು 6 ತಿಂಗಳಿಂದ ಹಣ ಬಾರದೇ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದರು.
ಒಂದೆಡೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೂ ವೇತನ ನೀಡಿಲ್ಲಾ, ಗ್ರಾಪಂಗಳಿಗೆ 15ನೇ ಹಣಕಾಸು ಯೋಜನೆ ಅನುದಾನ ಬಿಡುಗಡೆ ಮಾಡಿಲ್ಲ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎರಡು ತಿಂಗಳು ಕಳೆಯುತ್ತಾ ಬಂದರೂ ಗ್ಯಾರಂಟಿ ಯೋಜನೆಗಳೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಆರೋಪಿಸಿದರು.