ಗುಲ್ಲಹಳ್ಳಿ ಗ್ರಾಪಂನಿಂದ ಹಮ್ಮಿಕೊಂಡಿದ್ದ ಸಾಮಾಜಿಕ ಲೆಕ್ಕಪರಿಶೋಧನ ಹಾಗೂ ನರೇಗಾ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮಸಭೆಗೂ ಮುನ್ನ ವಾರ್ಡ್ ಸಭೆಗಳನ್ನು ನಡೆಸಿ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ಚರಂಡಿ, ಶಾಲಾ ಕಟ್ಟಡ ದುರಸ್ತಿ, ಶೌಚಗೃಹ ನಿರ್ಮಾಣ, ಅಂಗನವಾಡಿ ಕಟ್ಟಡ, ಕುಡಿಯುವ ನೀರಿನ ವ್ಯವಸ್ಥೆ ಸೇರಿ ವಿವಿಧ ಸಮುದಾಯ ಕಾಮಗಾರಿಗಳ ಬೇಡಿಕೆ ಸಂಗ್ರಹಿಸಲಾಗುತ್ತದೆ. ಅಲ್ಲದೆ ಮನೆ, ನಿವೇಶನ, ಜಾನುವಾರು ಕೊಟ್ಟಿಗೆ ಸೇರಿ ವೈಯಕ್ತಿಕ ಸೌಲಭ್ಯಕ್ಕೂ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.