ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ

ಶ್ರೇಣಿಕಕುಮಾರ ಧೋಕಾ
ಶ್ರೇಣಿಕಕುಮಾರ ಧೋಕಾ
Published on

ಪ್ರಮುಖ ಮುಖ್ಯಾಂಶಗಳು

  • ಅಧ್ಯಕ್ಷ ಶ್ರೇಣಿಕಕುಮಾರ ಧೋಕಾ ಹೇಳಿಕೆ
  • ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ
 ಯಾದಗಿರಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ವಿಷಯದಲ್ಲಿ ಜಿಲ್ಲೆಯ ಸಾರ್ವಜನಿಕರು ಯಾವುದೇ ಆಂತಕಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೇಣಿಕಕುಮಾರ ಧೋಕಾ ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಅನ್ಯ ರಾಜ್ಯಗಳ ಮತ್ತು ಮೃತರ ಪೈಕಿ ಅನೇಕರು ಗೃಹ ಲಕ್ಷಿ$್ಮ ಯೋಜನೆ ಲಾಭ ಪಡೆಯುವ ಮೂಲಕ ಸರ್ಕಾರಕ್ಕೆ ಮೋಸ ಮಾಡುತ್ತಿರುವ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪರಿಶೀಲನೆಗೆ ಮುಂದಾಗಿದೆ ಎಂದರು.
ಜಿಲ್ಲೆಯಲ್ಲಿ ಗೃಹ ಲಕ್ಷಿ$್ಮ ಯೋಜನೆಯಡಿ 266806 ಫಲಾನುಭವಿಗಳಿದ್ದಾರೆ, ಇದರಲ್ಲಿ  258879 ಜನರಿಗೆ ಕಳೆದ ಏಪ್ರಿಲ್​ ತಿಂಗಳವರೆಗೂ ಮಾಸಿಕ 2ಸಾವಿರ ರೂ.ಅವರವರ ಖಾತೆಗಳಿಗೆ ಜಮೆ ಮಾಡಲಾಗಿದೆ. ಈ ಗೊಂದಲ ಮುಗಿದ ನಂತರ ಮೇ ತಿಂಗಳ ಹಣವು ಖಾತೆಗಳಿಗೆ ಜಮೆಯಾಗಲಿದೆ ಎಂದರು. ಮೃತರ ಹೆಸರಲ್ಲಿ ಕೋಟ್ಯಂತರ ಹಣವನ್ನು ಖಾತೆಗಳಿಂದ ಪಡೆಯುತ್ತಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಮುಂದಾಗಿದೆಯೇ ಹೊರತು ಯೋಜನೆ ಯಾವುದೇ ಕಾರಣಕ್ಕೂ ಬಂದ್​ ಮಾಡುವುದಿಲ್ಲ ಎಂದು ಹೇಳಿದರು.
ಉಪಾಧ್ಯಕ್ಷರಾದ ಶ್ಯಾಮಸನ್​ ಮಾಳಿಕೇರಿ, ಹಣಮಂತ ಕಾನಳ್ಳಿ, ತಾಲೂಕು ಸಮಿತಿ ಅಧ್ಯಕ್ಷರು, ಸದಸ್ಯರು ಇತರರಿದ್ದರು. ಸಭೆಯಲ್ಲಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಪಂಚ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡಿದರು.
"

ರಾಜ್ಯ ಸರ್ಕಾರ ಜಾರಿಗೆ ತಂದ ಈ ಐದು ಗ್ಯಾರಂಟಿಗಳಿಂದ ಜಿಲ್ಲೆಯ ಎಲ್ಲ ಸಮುದಾಯಗಳ ಬಡವರಿಗೆ ಭಾರಿ ಅನುಕೂಲವಾಗಿದೆ. ಲಾಭ ಪಡೆಯುತ್ತಿರುವ ಫಲಾನುಭವಿಗಳ ಹರಕೆ ಈ ಸರ್ಕಾರದ ಮೇಲೆ ಸದಾ ಇರುತ್ತದೆ. ಎಷ್ಟು ಜನರು ಈ ಯೋಜನೆಗಳ ಸದ್ಬಳಿಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇದು ನಮ್ಮ ಸರ್ಕಾರಕ್ಕೆ ಹೆಮ್ಮೆಯ ವಿಷಯ.

— > ಶ್ಯಾಮಸನ್​ ಮಾಳಿಕೇರಿ ಉಪಾಧ್ಯಕ್ಷ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಯಾದಗಿರಿ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net