ಮನೆ ಪಟ್ಟಿ ಕಳುಹಿಸಿದ್ದರೂ ಕ್ರಮವಾಗಿಲ್ಲ

The house list was sent but it is not correct.
The house list was sent but it is not correct.
Published on
ಚಿಕ್ಕನಾಯಕನಹಳ್ಳಿ : -ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕನಸುನನಸು ಮಾಡಲೆಂದೇ ನಮ್ಮ ಎಸ್​. ಬಿ.ಚಾರಿಟಬಲ್​ ಟ್ರಸ್ಟ್​ ವತಿಯಿಂದ ಉಚಿತ ಸಿಇಟಿ ಹಾಗೂ ನೀಟ್​ ತರಬೇತಿಯನ್ನು ಕಳೆದ ಹಲವಾರು ವರ್ಷಗಳಿಂದ ನೀಡುತ್ತಿದ್ದು, ಇದರಿಂದ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ಶಾಸಕ ಸಿ.ಬಿ.ಸುರೇಶ್​ಬಾಬು ತಿಳಿಸಿದರು.
ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಪ್ರದೇಶದ ಮಕ್ಕಳಿಗೆ ಅವಕಾಶಗಳಿರುತ್ತವೆ ಹಾಗೂ ಹಣದ ವ್ಯವಸ್ಥೆಯು ಇರುತ್ತದೆ. ಅಂತಹವರು ಮಾತ್ರ ಸರ್ಕಾರಿ ಹಾಗೂ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್​ ಪಡೆಯುತ್ತಿದ್ದರು. ಇದರಿಂದ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೆ ತೊಂದರೆಯಾಗುತ್ತಿತ್ತು. ಇದನ್ನು ಅರಿತು ಎಸ್​.ಬಿ.ಚಾರಿಟಬಲ್​ ಟ್ರಸ್ಟ್​ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ಸುಲಭವಾಗಿ ಕೈಗೆಟುಕದ ಸಿಇಟಿ, ನೀಟ್​ ತರಬೇತಿಯನ್ನು ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ಅಧ್ಯಯನ ಪಠ್ಯಪುಸ್ತಕ, ಪೂರಕ ಸಾಮಗ್ರಿಗಳನ್ನು ನೀಡುವ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದರು.
ಜಿಲ್ಲೆಯ ಮಂತ್ರಿಗಳ ಹಿಂದೆ ಹೋಗುವಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ತಾಲೂಕುಗಳತ್ತ ತಿರುಗಿ ನೋಡಿಲ್ಲ. ಕ್ಷೇತ್ರದಲ್ಲಿ 5 ಸಾವಿರ ಮನೆಗಳಿಗೆ ಈಗಾಗಲೇ ಪಟ್ಟಿ ಸಿದ್ಧಪಡಿಸಿ ಕಳುಹಿಸಿದರೂ ಅದರ ಬಗ್ಗೆ ಕ್ರಮ ಕೈಗೊಳ್ಳುವ ಕೆಲಸವಾಗಿಲ್ಲ. ಎಲ್ಲ ವ್ಯವಸ್ಥೆಗಳನ್ನೊಳಗೊಂಡ ಸುಸಜ್ಜಿತ ಮಾದರಿ 10 ಶಾಲೆಗಳನ್ನು ತಾಲೂಕಿನಲ್ಲಿ ತೆರೆಯಲು ಸರ್ಕಾರ ಆದೇಶಿಸಿದ್ದರೂಈವರೆಗೂ ಯಾವುದೇ ಕ್ರಮವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸವಿತಾ ಸಮಾಜದ ಅಧ್ಯಕ್ಷ ಶಿವಣ್ಣ, ಈಡಿಗ ಸಮಾಜದ ಸೋಮಣ್ಣ, ಬೌದ್ಧ ಸಮಾಜದ ಮುಖಂಡ ಸಾಕ್ಯಗೌತಮ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net