ಸಂಗೊಳ್ಳಿ ರಾಯಣ್ಣರ ಹೆಜ್ಜೆ ಗುರುತು ಮೈಗೂಡಿಸಿಕೊಳ್ಳಿ: ಯುವಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಲಹೆ - CM D.K. Shivakumar

ಸಿಎಂ ಡಿ.ಕೆ. ಶಿವಕುಮಾರ್
ಸಿಎಂ ಡಿ.ಕೆ. ಶಿವಕುಮಾರ್
Published on

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಚಿಕ್ಕ ವಯಸ್ಸಿನಲ್ಲೇ ಪ್ರಾಣತ್ಯಾಗ ಮಾಡಿದ ಸಂಗೊಳ್ಳಿ ರಾಯಣ್ಣ ಅವರ ಹೆಜ್ಜೆ ಗುರುತುಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕೆಂದು ಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ.

ಮೆಜೆಸ್ಟಿಕ್ ಸಮೀಪ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಗಾಗಿ ಇಂತಹ ನಾಯಕರು ಮತ್ತೆ ಹುಟ್ಟಿ ಬರಬೇಕು. ಮಹಾನಾಯಕರ ತ್ಯಾಗ, ಬಲಿದಾನ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದರು.
ದೇಶದ ಸ್ವಾತಂತ್ರ್ಯ ದಿನ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ,ಎರಡೂ ಒಂದೇ ದಿನ ಬಂದಿರುವುದು ವಿಶೇಷ. ನಮ್ಮ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ, ಯುವಜನತೆಗೆ ರಾಷ್ಟ್ರಭಕ್ತಿ ಮತ್ತು ಸ್ಪೂರ್ತಿ ತುಂಬಲು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಸ್ಥಾಪನೆಗೆ ಕ್ರಮ ತೆಗೆದುಕೊಂಡಿದ್ದರು. ಅದರ ಕೆಲಸವನ್ನು ಆರಂಭಿಸಿದ್ದೇವೆ. ಬೆಂಗಳೂರಿನ ಕೇಂದ್ರ ಭಾಗವಾದ ಗಾಂಧಿನಗರ ಕ್ಷೇತ್ರ ವ್ಯಾಪ್ತಿಯ ವೃತ್ತಕ್ಕೆ ರಾಯಣ್ಣ ಹೆಸರಿಡಲು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದರು.
ಶಾಸಕ ದಿನೇಶ್ ಗುಂಡೂರಾವ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಮಾಜಿ ಶಾಸಕ ನೆ ಲ ನರೇಂದ್ರ ಬಾಬು ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net