ಮಾನವೀಯ ಮೌಲ್ಯಗಳ ಅಳವಡಿಕೆ ಅಗತ್ಯ

 ಬೀಳಗಿ ಪಟ್ಟಣ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಮುದಾಯ ಭವನದಲ್ಲಿ ತಾಲೂಕು ಛಲವಾದಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪುರಸ್ಕಾರ ಸಮಾರಂಭವನ್ನು ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಪ್ರೇಮನಾಥ ಗರಸಂಗಿ, ಪಡಿಯಪ್ಪ ಕಳ್ಳಿಮನಿ, ಬಸವರಾಜ ಬಸವರಾಜ ಹಳ್ಳದಮನಿ, ಪ್ರಾಂಶುಪಾಲ ಡಿ.ಎಂ.ಚಲವಾದಿ, ಗುರುನಾಥ ತಳವಾರ ಇತರರಿದ್ದರು.
ಬೀಳಗಿ ಪಟ್ಟಣ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಮುದಾಯ ಭವನದಲ್ಲಿ ತಾಲೂಕು ಛಲವಾದಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪುರಸ್ಕಾರ ಸಮಾರಂಭವನ್ನು ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಪ್ರೇಮನಾಥ ಗರಸಂಗಿ, ಪಡಿಯಪ್ಪ ಕಳ್ಳಿಮನಿ, ಬಸವರಾಜ ಬಸವರಾಜ ಹಳ್ಳದಮನಿ, ಪ್ರಾಂಶುಪಾಲ ಡಿ.ಎಂ.ಚಲವಾದಿ, ಗುರುನಾಥ ತಳವಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ ಹೇಳಿಕೆ
  • ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಬೀಳಗಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದು ಸಮಾಜದ ಆಸ್ತಿಯಾಗಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ ಹೇಳಿದರು.
ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಮುದಾಯ ಭವನದಲ್ಲಿ ತಾಲೂಕು ಛಲವಾದಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ಮುಂದುವರಿಯಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಯುವಜನತೆಗೆ ದಿಕ್ಕು ತೋರಿಸುವಂತಿವೆ ಎಂದು ಹೇಳಿದರು.
ಪ್ರಾಂಶುಪಾಲ ಡಿ.ಎಂ. ಚಲವಾದಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳು ಲಭ್ಯವಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯಪಾಲಕ ಗುರುನಾಥ ತಳವಾರ ವಿಶೇಷ ಉಪನ್ಯಾಸ ನೀಡಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ವಿದ್ಯಾಭ್ಯಾಸದ ಆಯ್ಕೆಗಳು ಹಾಗೂ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ನಿವತ್ತ ಶಿಕ್ಷಕರು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಪ್ರೇಮನಾಥ ಗರಸಂಗಿ, ಪಡಿಯಪ್ಪ ಕಳ್ಳಿಮನಿ, ಬಸವರಾಜ ಹಳ್ಳದಮನಿ, ಹನಮಂತ ಗಚ್ಚಿನಮನಿ, ಸಮಾಜ ಕಲ್ಯಾಣ ಇಲಾಖೆ ನಿಲಯ ಪಾಲಕ ರಾಜೇಂದ್ರ ಬೀಳಗಿ, ಶಿವಪ್ಪ ಚಲವಾದಿ, ಮಹಾದೇವಪ್ಪ ಚಲವಾದಿ, ಹುಸೇನ ಚಲವಾದಿ, ಸಂಪಾದಕರಾದ ಚನ್ನಬು ಚಲವಾದಿ, ತಿಪ್ಪಣ ಚಲವಾದಿ, ಸಂತೋಷ್ ಕಳ್ಳಿಮನಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net