ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಸಿಟಿ ರವಿ, ಸುಧಾಕರ್ ಸೇರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ನೀಡಿದ್ದು, ಪಿಆರ್‌ಸಿ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಪಿಆರ್‌ಸಿ ದೇಶದ ಭದ್ರತೆಗೆ ಆತಂಕ ತರಲಿದೆ. ಈ ಹಿನ್ನೆಲೆ ತಾವು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ.