ಹಡಪದ ಅಪ್ಪಣ್ಣ ತತ್ವಾದರ್ಶ ಅನುಕರಣೀಯ

ಚಿಮ್ಮಡ ಗ್ರಾಮದಲ್ಲಿ ಹಡಪದ ಅಪ್ಪಣ್ಣ ಸಮುದಾಯದ ಮಂಜೂರಾದ 5 ಲಕ್ಷ ರೂ. ಅನುದಾನದ ಕಾಮಗಾರಿಗೆ ಶಾಸಕ ಸಿದ್ದು ಸವದಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಪ್ರಭು ಸ್ವಾಮೀಜಿ, ಶಿವಾನಂದ ನಾವಿ, ಗುರುಲಿಂಗಪ್ಪ ಪೂಜಾರಿ, ಬೀರಪ್ಪ ಹಳಮಣಿ ಇತರರಿದ್ದರು.
ಚಿಮ್ಮಡ ಗ್ರಾಮದಲ್ಲಿ ಹಡಪದ ಅಪ್ಪಣ್ಣ ಸಮುದಾಯದ ಮಂಜೂರಾದ 5 ಲಕ್ಷ ರೂ. ಅನುದಾನದ ಕಾಮಗಾರಿಗೆ ಶಾಸಕ ಸಿದ್ದು ಸವದಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಪ್ರಭು ಸ್ವಾಮೀಜಿ, ಶಿವಾನಂದ ನಾವಿ, ಗುರುಲಿಂಗಪ್ಪ ಪೂಜಾರಿ, ಬೀರಪ್ಪ ಹಳಮಣಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿದ್ದು ಸವದಿ ಅಭಿಮತ
  • ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ
ಚಿಮ್ಮಡ: ಗ್ರಾಮದಲ್ಲಿ ಹಡಪದ ಅಪ್ಪಣ್ಣ ಸಮುದಾಯದ ಬಹುದಿನಗಳ ಕನಸಾಗಿದ್ದ ಸಮುದಾಯ ಭವನ ಅಭಿವದ್ಧಿ ಕಾಮಗಾರಿಗೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂ. ಅನುದಾನದ ಕಾಮಗಾರಿಗೆ ಶಾಸಕ ಸಿದ್ದು ಸವದಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಸಿದ್ದು ಸವದಿ, ಹಡಪದ ಅಪ್ಪಣ್ಣ ವಚನ ಸಾಹಿತ್ಯ ಮತ್ತು ಶರಣ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ ಮಹನೀಯರು. ಅವರ ತತ್ವಾದರ್ಶಗಳನ್ನು ಪಾಲಿಸುವ ಸಮಾಜದ ಅಭಿವದ್ಧಿಗೆ ಸರ್ಕಾರ ಸದಾಬದ್ಧವಾಗಿದೆ ಎಂದು ಹೇಳಿದರು.
ಸಮುದಾಯ ಭವನಗಳು ಕೇವಲ ಕಟ್ಟಡಗಳಾಗಿರದೆ, ಸಮಾಜದ ಜನರನ್ನು ಒಗ್ಗೂಡಿಸುವ ಹಾಗೂ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿವೆ. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.
ಗ್ರಾಮೀಣ ಭಾಗದ ಎಲ್ಲ ಸಮುದಾಯಗಳಿಗೂ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಸಾಮಾಜಿಕ ಅಭಿವದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ದಿವ್ಯ ಸಾನ್ನಿಧ್ಯ ವಹಿಸಿದ್ದ ಪ್ರಭು ಸ್ವಾಮೀಜಿಗಳು ಆಶೀರ್ವಚನ ನೀಡಿ, ಸಮಾಜದ ಅಭಿವದ್ಧಿಗಾಗಿ ಜನಪ್ರತಿನಿಧಿಗಳು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಶಿಕ್ಷಣ, ಸಂಘಟನೆ ಹಾಗೂ ಸಾಮಾಜಿಕ ಜಾಗತಿಯ ಮೂಲಕ ಸಮಾಜ ಇನ್ನಷ್ಟು ಪ್ರಗತಿಯತ್ತ ಸಾಗಬೇಕು. ನಿರ್ಮಾಣವಾಗುತ್ತಿರುವ ಸಮುದಾಯ ಭವನವು ಸಮಾಜದ ಎಲ್ಲ ವರ್ಗದವರನ್ನು ಒಗ್ಗೂಡಿಸುವ ಕೇಂದ್ರವಾಗಲಿ ಎಂದು ಹಾರೈಸಿದರು.
ಸಮುದಾಯದ ಮುಖಂಡ ಶಿವಾನಂದ ನಾವಿ ಮಾತನಾಡಿ, ಸಮುದಾಯ ಭವನ ನಿರ್ಮಾಣವು ನಮ್ಮ ಸಮಾಜದ ಬಹು ವರ್ಗಗಳ ಬೇಡಿಕೆಯಾಗಿತ್ತು. ಶಾಸಕರ ಪ್ರಯತ್ನದಿಂದ ಅನುದಾನ ದೊರೆತಿರುವುದು ಸಂತಸದ ಸಂಗತಿಯಾಗಿದೆ. ಈ ಭವನದಿಂದ ಸಮಾಜದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಗುರುಲಿಂಗಪ್ಪ ಪೂಜಾರಿ, ಶಂಕರ ಬಟಕುರ್ಕಿ, ಬೀರಪ್ಪ ಹಳಮಣಿ, ಪ್ರಭು ಮುಧೋಳ, ಮನೋಜ ಹಟ್ಟಿ, ಚೆನ್ನಪ್ಪ ತೇಲಿ, ಪ್ರಕಾಶ ಪಾಟೀಲ, ಕುಮಾರ್ ಪೂಜಾರಿ, ಆನಂದ ಕೌಟಿ, ಅವ್ವಣ್ಣಪ್ಪ ಮುಗಳಕೋಡ, ನಾಗಪ್ಪ ನಾವಿ, ಪ್ರಭು ನಾವಿ, ಅಲ್ಲಪ್ಪ ನಾವಿ, ಮಹಾಲಿಂಗ ನಾವಿ, ಬಸವರಾಜ ನಾವಿ, ಶ್ರೀಶೈಲ ನಾವಿ ಸೇರಿ ಸಮಾಜದ ಮುಖಂಡರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net