ಹಡಪದ ಅಪ್ಪಣ್ಣ ತತ್ವಾದರ್ಶ ಇಂದಿಗೂ ಪ್ರಸ್ತುತ

ರಬಕವಿ ಬನಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು. ಶಾಸಕ ಸಿದ್ದು ಸವದಿ, ತಹಸೀಲ್ದಾರ್ ಗಿರೀಶ ಸ್ವಾದಿ, ಸಂಗಪ್ಪ ಕುಂದಗೋಳ, ಬುದ್ದಪ್ಪ ಕುಂದಗೋಳ, ಸುಭಾಸ ಹಡಪದ, ಗಿರಿಮಲ್ಲಪ್ಪ ನಾವಿ, ಹನಮಂತ ನಾವಿ, ಅಶೋಕ ಹುನ್ನೂರ, ಮಲ್ಲು ನಾವಿ, ಸಿಪಿಐ ರಾಜು ಪಾಟೀಲ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿಕೆ
  • ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ
ರಬಕವಿ-ಬನಹಟ್ಟಿ: ಹಡಪದ ಅಪ್ಪಣ್ಣ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಸಂತರಾಗಿದ್ದರು ಎಂದು ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.
ನಗರದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಹಡಪದ ಅಪ್ಪಣ್ಣ ತತ್ವಾದರ್ಶಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ. ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ನ್ಯಾಯದ ಮೌಲ್ಯ ಬಲಪಡಿಸುವಲ್ಲಿ ಅವರ ಸಂದೇಶಗಳು ಮಹತ್ವದ್ದಾಗಿವೆ ಎಂದರು.
ತಹಸೀಲ್ದಾರ್ ಗಿರೀಶ ಸ್ವಾದಿ ಮಾತನಾಡಿ, ಹಡಪದ ಅಪ್ಪಣ್ಣ ಜೀವನವು ಸಮಾಜ ಸುಧಾರಣೆಗೆ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರ ಮಹನೀಯರ ಜಯಂತಿಗಳನ್ನು ಆಚರಿಸುವ ಉದ್ದೇಶ ಸಮಾಜದಲ್ಲಿ ಅವರ ವಿಚಾರಧಾರೆಗಳನ್ನು ಪರಿಚಯಿಸಿ, ಯುವ ಪೀಳಿಗೆಯಲ್ಲಿ ಮೌಲ್ಯಗಳನ್ನು ಬೆಳೆಸುವುದಾಗಿದೆ ಎಂದು ಹೇಳಿದರು.
ಮುಖಂಡರಾದ ಸಂಗಪ್ಪ ಕುಂದಗೋಳ, ಬುದ್ದಪ್ಪ ಕುಂದಗೋಳ, ಸುಭಾಸ ಹಡಪದ, ಗಿರಿಮಲ್ಲಪ್ಪ ನಾವಿ, ಹನಮಂತ ನಾವಿ, ಅಶೋಕ ಹುನ್ನೂರ, ಮಲ್ಲು ನಾವಿ, ಸಿಪಿಐ ರಾಜು ಪಾಟೀಳ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net