ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ

The practice of untouchability is a punishable offence.
The practice of untouchability is a punishable offence.
Published on
ಮಧುಗಿರಿ: ಸವಾಜದಲ್ಲಿ ಸವಾನತೆ ತರುವ ಉದ್ದೇಶದಿಂದ ಅಸ್ಪೃಶ್ಯತೆಯನ್ನು ನಿಷೇಧಿಸಲಾಗಿದೆ ಎಂದು ತಾಲೂಕು ಸವಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಬಿ.ದಿನೇಶ್ ತಿಳಿಸಿದರು.
ಪಟ್ಟಣದ ಸರ್ಕಾರಿ ದರ್ಜೆ ಕಾಲೇಜು ಮತ್ತು ತಹಸೀಲ್ದಾರ್ ಕಾರ್ಯಾಲಯದ ಸಹಯೋಗದಲ್ಲಿ ಗುರುವಾರ 2025-26ನೇ ಸಾಲಿನಲ್ಲಿ ದೌರ್ಜನ್ಯ ಪ್ರಕರಣಗಳನ್ನು ತಡೆಯುವ ಸಂಬಂಧ ಅಸ್ಪೃಶ್ಯತೆ ನಿರ್ಮೂಲನೆ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ವಾತನಾಡಿದರು.
ಅಸ್ಪೃಶ್ಯತೆ ಆಚರಣೆ ಸಂವಿಧಾನಾತ್ಮಕವಾಗಿ ನಿಷೇಧಿಸಲಾಗಿದೆ. ಅಸ್ಪೃಶ್ಯತೆ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ನಿಷೇಧಿಸಿದ್ದರೂ ಗ್ರಾವಾಂತರ ಪ್ರದೇಶಗಳಲ್ಲಿ ಜನರಿಗೆ ಅರಿವಿಲ್ಲದೆ ಇರುವುದರಿಂದ ಕೆಲವು ಕಡೆ ಆಚರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಬೀದಿ ನಾಟಕಗಳ ಮೂಲಕ ಇದರ ನಿರ್ಮೂಲನೆಗೆ ಪಣತೊಡಲಾಗಿದೆ ಎಂದು ತಿಳಿಸಿದರು.
ಚಿಕ್ಕರಂಗಪ್ಪ, ದಲಿತ ಸಂಟನೆ ಮುಖಂಡರಾದ ಬೆಲ್ಲದಮಡಗು ಭರತ್, ಮಲೆ ರಂಗಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕುವಾರ್ ಉಪನ್ಯಾಸಕರಾದ ಮುರಳಿ, ಮಂಜುನಾಥ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net