ಕಲ್ಬುರ್ಗಿ ಪೀಠ ಅರಂಬವಾದ ಬಳಿಕ 16640 ಪ್ರಕರಣ ಧಾಖಲಾಗಿ ಇಲ್ಲಿಯವರೆಗೆ 10,423 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ನಾನು ಈ ಕಲಬುರಗಿ ಪೀಠದ ಮಾಹಿತಿ ಆಯುಕ್ತನಾಗಿ ಅಧಿಕಾರ ಸ್ವೀಕರಿಸಿದ 3 ತಿಂಗಳ ಅವಧಿಯಲ್ಲಿ 1,400 ಪ್ರಕರಣಗಳನ್ನು ವಿಚಾರಣೆ ಮಾಡಿ 605 ಪ್ರಕರಣಗಳನ್ನು ವಿಲೇವಾರಿ ಮಾಡಿದ್ದೇನೆ. 6,655 ಪ್ರಕರಣಗಳು ಇನ್ನೂ ವಿಲೇವಾರಿಗೆ ಬಾಕಿ ಇದ್ದು, ಆದ್ಯತೆ ಮೇರೆಗೆ ಸೋಮವಾರದಿಂದ ಶುಕ್ರವಾರ ರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ 764 ಪ್ರಕರಣಗಳು ಬಾಕಿ ಇವೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮತ್ತು ಬೀದರ ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಕರಣಗಳು ಇವೆ. ಇದುವರೆಗೂ ದ್ವಿತೀಯ ಮೇಲ್ಮನವಿ ವಿಚಾರಣೆಗೆ ಅರ್ಜಿದಾರರು ಹಾಗೂ ಅಧಿಕಾರಿಗಳು ಬೆಂಗಳೂರಿಗೆ ಹೋಗಬೇಕಿತ್ತು. ಆದರೆ ಫೆಬ್ರವರಿಯಿಂದ ಆಯೋಗದ ಕಲಬುರಗಿ ಪೀಠದಲ್ಲಿ ದ್ವಿತೀಯ ಮೇಲ್ಮನವಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕಲ್ಯಾಣ ಕರ್ನಾಟಕದ ಎಲ್ಲ 7 ಜಿಲ್ಲೆಗಳ ಜನರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ಹೇಳಿದರು.