ಪರಿಸರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕ

ಹಸಿರು ಭೂಮಿ ಪ್ರತಿಷ್ಠಾನದಿಂದ ಬೇಲುರಿನ ಉದ್ಯಾನವಲ್ಲಿ ಗಣ್ಯರು ಗಿಡ ನೆಟ್ಟರು. ತೀರ್ಥಕುಮಾರಿ ವೆಂಕಟೇಶ್, ಅಕ್ರಂ ಷರೀಫ್, ಬಿ.ಎಂ.ಸಂತೋಷ್, ಉಷಾ ಸತೀಶ್, ಜಮೀಲಾ ತೌಫಿಕ್,  ಬಸವರಾಜ್ ಸಿಗ್ಗಾವಿ, ಲೋಹಿತ್, ತೀರ್ಥಂಕರ್ ಇದ್ದರು.
ಹಸಿರು ಭೂಮಿ ಪ್ರತಿಷ್ಠಾನದಿಂದ ಬೇಲುರಿನ ಉದ್ಯಾನವಲ್ಲಿ ಗಣ್ಯರು ಗಿಡ ನೆಟ್ಟರು. ತೀರ್ಥಕುಮಾರಿ ವೆಂಕಟೇಶ್, ಅಕ್ರಂ ಷರೀಫ್, ಬಿ.ಎಂ.ಸಂತೋಷ್, ಉಷಾ ಸತೀಶ್, ಜಮೀಲಾ ತೌಫಿಕ್, ಬಸವರಾಜ್ ಸಿಗ್ಗಾವಿ, ಲೋಹಿತ್, ತೀರ್ಥಂಕರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಸಿರು ಭೂಮಿ ಪ್ರತಿಷ್ಠಾನ
  • ಪಟ್ಟಣದ 6ನೇ ವಾರ್ಡ್‌ನ ಉದ್ಯಾನ
ಬೇಲೂರು: ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಮತ್ತು ಸದಸ್ಯರು ಹಾಗೂ ವಿವಿಧ ಸಂಘಟನೆ ಮುಖಂಡರು ಪಟ್ಟಣದ 6ನೇ ವಾರ್ಡ್‌ನ ಉದ್ಯಾನದಲ್ಲಿ ಗಿಡಗಳನ್ನು ನೆಡುವ ಮೂಲಕ ಮಂಗಳವಾರ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕನವರ ಹುಟ್ಟುಹಬ್ಬವನ್ನು ಆಚರಿಸಿದರು.
ತೀರ್ಥಕುಮಾರಿ ವೆಂಕಟೇಶ್ ಮಾತನಾಡಿ, ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕನವರು ಪರಿಸರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಮಕ್ಕಳಿಲ್ಲದ ತಿಮ್ಮಕ್ಕ ಗಿಡಗಳನ್ನೇ ತನ್ನ ಮಕ್ಕಳೆಂದು ಪೋಷಿಸಿದರು. ಅವರು ನಮ್ಮ ಊರಿನಲ್ಲಿ ಕೊನೆಯ ದಿನಗಳನ್ನು ಕಳೆದಿದ್ದರು ಎಂದು ಸ್ಮರಿಸಿದರು.
ಸಾಲು ಮರದ ತಿಮ್ಮಕ್ಕ ಪರಿಸರ ಪ್ರೇಮಿ, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಆದರ್ಶ ಪ್ರಾಯರಾಗಿದ್ದಾರೆ. ಅಕ್ಷರ ಕಲಿಯದಿದ್ದರೂ ಕಲಿತವರಿಗಿಂತ ಹೆಚ್ಚಾಗಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿ ನಾಡಿಗೆ ಕೊಡುಗೆ ನೀಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಉಳಿಸುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಹಾಗಾದಾಗ ಮಾತ್ರ ನಾವು ಪರಿಸರಕ್ಕೆ ಕೊಡುಗೆ ಕೊಟ್ಟಂತಾಗುತ್ತದೆ ಎಂದರು.
ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಮಾತನಾಡಿ, ಪರಿಸರ ಉಳಿಸುವ ನಿಟ್ಟಿನಲ್ಲಿ ಹಸಿರು ಭೂಮಿ ಪ್ರತಿಷ್ಠಾನ ಕೈಗೊಳ್ಳುತ್ತಿರುವ ಕೆಲಸಗಳು ಶ್ಲಾಘನೀಯ. ಪುರಸಭೆಯಿಂದಲೂ ನಾವುಗಳು ಪರಿಸರ ಉಳಿಸುವುದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸುತ್ತಿದ್ದೇವೆ ಎಂದರು.
ಬೇಲೂರು ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಬಿ.ಎಂ.ಸಂತೋಷ್, ಪುರಸಭೆ ಉಪಾಧ್ಯಕ್ಷೆ ಉಷಾ ಸತೀಶ್, ಸದಸ್ಯೆ ಜಮೀಲಾ ತೌಫಿಕ್, ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ, ಆರೋಗ್ಯಾಧಿಕಾರಿ ಲೋಹಿತ್, ರಾಜ್‌ಕುಮಾರ್ ಸಂಘದ ಅಧ್ಯಕ್ಷ ತೀರ್ಥಂಕರ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net