ಚಿಟಗುಪ್ಪದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಮರುಳಾರಾಧ್ಯ ಶಿವಾಚಾರ್ಯರ ಜನ್ಮದಿನೋತ್ಸವ ಹಾಗೂ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಮಾತನಾಡಿದರು. ಶ್ರೀ ಗುರುಲಿಂಗ ಶಿವಾಚಾರ್ಯರು, ಶ್ರೀ ಅಭಿನವ ಶಂಕರಲಿಂಗ ಮಹಾರಾಜರು, ಐನಾಪುರ ಶ್ರೀಮಠದ ಶ್ರೀ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಬಣ್ಣನೆ
ಚಿಟಗುಪ್ಪದಲ್ಲಿ ಜನ್ಮದಿನೋತ್ಸವ
ಚಿಟಗುಪ್ಪ: ಸಮಾಜಮುಖಿ ಚಿಂತನೆ, ಧಾರ್ಮಿಕ ಸೇವೆ ಹಾಗೂ ಧರ್ಮ ಪ್ರಸಾರದಲ್ಲಿ ತೊಡಗಿಸಿಕೊಂಡಿರುವ ಚಿಟಗುಪ್ಪ ಹಾಗೂ ಚಾಂಗಲೇರಾ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಮರುಳಾರಾಧ್ಯ ಶಿವಾಚಾರ್ಯರ ಜನ್ಮದಿನೋತ್ಸವ ಹಾಗೂ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮ ಹಾಗೂ ಸಂಸ್ಜೃತಿಯ ಮೌಲ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶ್ರೀಗಳು ಅವಿರತ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಧಾರ್ಮಿಕ ಹಾಗೂ ಸಾಂಸತಿಕ ಕಾರ್ಯಕ್ರಮಗಳ ಮೂಲಕ ಬಸವಣ್ಣನವರ ತತ್ವ- ಸಿದ್ಧಾಂತಗಳನ್ನು ಪರಿಣಾಮಕಾರಿಯಾಗಿ ಪ್ರಸಾರ ಮಾಡುತ್ತಿದ್ದು, ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.
ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯಾತ್ಮಿಕ ಮಾರ್ಗದರ್ಶನವೂ ಅಗತ್ಯವಾಗಿದ್ದು, ಶ್ರೀಗಳ ಸೇವೆ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.
ಶ್ರೀಮಠದ ಹಿರಿಯ ಶ್ರೀ ಗುರುಲಿಂಗ ಶಿವಾಚಾರ್ಯರು, ಸೊಂತದ ಶ್ರೀ ಅಭಿನವ ಶಂಕರಲಿಂಗ ಮಹಾರಾಜರು, ಐನಾಪುರ ಶ್ರೀಮಠದ ಶ್ರೀಗಳು, ಸೂರ್ಯಕಾಂತ ಮಠಪತಿ, ಬಸವರಾಜ ಪಾಟೀಲ ಬೆಳಕೇರಾ, ಅನಿಲ ಜೋಶಿ, ಅಮಿತಾ ತೋಗಲೂರೆ, ಸಚಿನ್ ಮಠಪತಿ, ಡಾ.ವಿಜಯ ಹಿರಸ್ಕಾರ ಹಾಗೂ ಭಕ್ತರು ಇದ್ದರು.