ಸ್ಪಂದನ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ಶ್ಲಾಘನೀಯ

ವಿಜಯಪುರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಐಆರ್‌ಡಿ ಮತ್ತು ಸ್ಪಂದನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತೆರೆಯಲಾದ ಉಚಿತ ಅನೀಮಿಯಾ ಅರಿವು, ರಕ್ತಹೀನತೆ ತಪಾಸಣೆ ಹಾಗೂ ಔಷಧಿ ವಿತರಣಾ ಕೇಂದ್ರವನ್ನು ಗಣ್ಯರು ಉದ್ಘಾಟಿಸಿದರು. ಶಿವಾನಂದ ಮಾಸ್ತಿಹೊಳಿ, ಬಾಬು ಸಜ್ಜನ, ಎಂ.ಎಸ್. ದೇವರ ಮತ್ತಿತರರಿದ್ದಾರೆ.
ವಿಜಯಪುರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಐಆರ್‌ಡಿ ಮತ್ತು ಸ್ಪಂದನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತೆರೆಯಲಾದ ಉಚಿತ ಅನೀಮಿಯಾ ಅರಿವು, ರಕ್ತಹೀನತೆ ತಪಾಸಣೆ ಹಾಗೂ ಔಷಧಿ ವಿತರಣಾ ಕೇಂದ್ರವನ್ನು ಗಣ್ಯರು ಉದ್ಘಾಟಿಸಿದರು. ಶಿವಾನಂದ ಮಾಸ್ತಿಹೊಳಿ, ಬಾಬು ಸಜ್ಜನ, ಎಂ.ಎಸ್. ದೇವರ ಮತ್ತಿತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಹೇಳಿಕೆ
  • ಔಷಧಿ ವಿತರಣಾ ಕೇಂದ್ರ ಉದ್ಘಾಟನೆ
ವಿಜಯಪುರ: ಅನೀಮಿಯಾ ಮುಕ್ತ ಭಾರತ ಹಾಗೂ ಅನೀಮಿಯಾ ಮುಕ್ತ ಕರ್ನಾಟಕ ಅಭಿಯಾನಕ್ಕೆ ಕೈಜೋಡಿಸಿ ರಾಜ್ಯಾದ್ಯಂತ ಜನಜಾಗೃತಿ, ತಪಾಸಣೆ ಹಾಗೂ ಉಚಿತ ಔಷಧಿ ವಿತರಣೆಯ ಮೂಲಕ ಮಹತ್ವದ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ಐಆರ್‌ಡಿ) ಮತ್ತು ಸ್ಪಂದನ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಹೇಳಿದರು.
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಐಆರ್‌ಡಿ ಮತ್ತು ಸ್ಪಂದನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತೆರೆಯ ಲಾದ ಉಚಿತ ಅನೀಮಿಯಾ ಅರಿವು, ರಕ್ತಹೀನತೆ ತಪಾಸಣೆ ಹಾಗೂ ಔಷಧಿ ವಿತರಣಾ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಪ್ರಾಯೋಗಿಕವಾಗಿ 577 ಶಾಲಾ ಮಕ್ಕಳ ರಕ್ತಹೀನತೆ ತಪಾಸಣೆ ನಡೆಸಿತ್ತು. ಈ ವೇಳೆ ಶೇ. 38 ರಷ್ಟು ಮಕ್ಕಳು ಅನೀಮಿಯಾದಿಂದ ಬಳಲುತ್ತಿರುವುದು ಪತ್ತೆಯಾಗಿತ್ತು. ರಾಜ್ಯದ 23ಜಿಲ್ಲೆಗಳಲ್ಲಿ 28 ಸ್ವಯಂಸೇವಾ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿದ್ದು, ಎರಡು ವರ್ಷ ಮೇಲ್ಪಟ್ಟ ಮಕ್ಕಳಿಂದ ಹಿಡಿದು ಎಲ್ಲಾ ವರ್ಗದ ಜನರಿಗೆ ಉಚಿತ ಅನೀಮಿಯಾ ತಪಾಸಣೆ, ಔಷಧಿ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯದಲ್ಲಿ ಸದ್ಯದವರೆಗೆ 15.50 ಲಕ್ಷಕ್ಕೂ ಹೆಚ್ಚು ಜನರಿಗೆ ರಕ್ತಹೀನತೆ ಪರೀಕ್ಷೆ ನಡೆಸಿ ಉಚಿತ ಔಷಧಿ ವಿತರಿಸಲಾಗಿದೆ ಎಂದರು.
ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಿಇಒ ಬಾಬು ಸಜ್ಜನ ಮಾತನಾಡಿ, ವಿಜಯಪುರದಿಂದ ಆರಂಭವಾದ ಅನೀಮಿಯಾ ಕಾರ್ಯಕ್ರಮ ಇಂದು ರಾಜ್ಯದಾದ್ಯಂತ ವಿಸ್ತರಿಸಿದೆ. ಆರೋಗ್ಯದ ಮೂಲಭೂತ ಅಗತ್ಯಗಳಲ್ಲಿ ಒಂದಾದ ರಕ್ತಹೀನತೆ ತಪಾಸಣೆ ಉಚಿತವಾಗಿ ಒದಗಿಸುವ ಮೂಲಕ ಒಂದು ಕೋಟಿ ಜನರನ್ನು ತಲುಪುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.
ಎಂ.ಎಸ್. ದೇವರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net