ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ

,
,
Published on

ಕಲಬುರಗಿ: ಏನೆಲ್ಲಾ ಸಂಪತ್ತು ಗಳಿಸಿ, ಆರೋಗ್ಯ ಕಳೆಸುಕೊಂಡರೆ ಅದು ವ್ಯರ್ಥ. ಆರೋಗ್ಯವೇ ಮನುಷ್ಯನ ನೈಜ ಸಂಪತ್ತಾಗಿದೆ. ಆರೋಗ್ಯವು ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಉತ್ತಮ ಸ್ಥಿತಿಯಲ್ಲಿರುವುದಾಗಿದೆ ಎಂದು ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲನಿ ಕ್ರಾಸ್ ಸಮೀಪದ 'ಬಸವಗಂಗಾ ಕ್ಲಿನಿಕ್'ನಲ್ಲಿ 'ಬಸವೇಶ್ವರ ಸಮಾಜ ಸೇವಾ ಬಳಗ'ದ ವತಿಯಿಂದ ಮಂಗಳವಾರ ಸಂಜೆ ಜರುಗಿದ "ವಿಶ್ವ ಆರೋಗ್ಯ ದಿನಾಚರಣೆ" ಯಲ್ಲಿ ಅವರು ಮಾತನಾಡುತ್ತಿದ್ದರು. ಉಪನ್ಯಾಸಕ ಎಚ್.ಬಿ.ಪಾಟೀಲ್ ಮಾತನಾಡಿ, "ಆರೋಗ್ಯವೇ ಭಾಗ್ಯ" ಎಂಬಂತೆ, ಉತ್ತಮ ಆರೋಗ್ಯವು ದೀರ್ಘಾಯುಷ್ಯ, ಬಲವಾದ ರೋಗನಿರೋಧಕ ಶಕ್ತಿ ಮತ್ತು ಸಂತೋಷದ ಜೀವನಕ್ಕೆ ಅಡಿಪಾಯವಾಗಿದೆ. ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ, ಮತ್ತು ಸ್ವಚ್ಛತೆಯು ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟಿ, ಸಮಾಜದ ಉತ್ಪಾದಕತೆಯನ್ನು ಹೆಚ್ಚಿಸಲು ಅತ್ಯಗತ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಹಾಬಜಾರ ಘಟದ ಭಾರತ ಜ್ಞಾನ ವಿಜ್ಞಾನ ಸಮಿತಿಯ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್. ಬಿರಾದಾರ, ಪ್ರಮುಖರಾದ ದಿನೇಶ್ ಮಿಶ್ರಾ, ಅಬ್ದುಲ್ ರೆಹಮಾನ್ ಸೇರಿದಂತೆ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net