ಬಸವನಬಾಗೇವಾಡಿ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ವಿಜಯಪುರ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಹಾಯಕ ಕೃಷಿ ನಿರ್ದೇಶಕ ಆಮಗೊಂಡ ಬಿರಾದಾರ, ತಾಂತ್ರಿಕ ಅಧಿಕಾರಿ ಗಾಯತ್ರಿ ಶಿಂಧೆ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿಕೆ
ಗುಣಮಟ್ಟದ ಪರಿಕರ ವಿತರಿಸಿ
ಬಸವನಬಾಗೇವಾಡಿ: ಜಿಲ್ಲೆಯ ಯಾವುದೇ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜಗಳಿಗೆ ಯಾವುದೇ ಕೊರತೆಯಿಲ್ಲ, ರೈತರಿಗೆ ಯಾವುದೇ ಆತಂಕ ಬೇಡ ಎಂದು ವಿಜಯಪುರ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿದರು.
ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ರೈತ ಸಂಪರ್ಕ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ, ರೈತರಿಗೆ ಬೀಜ ಹಾಗೂ ಗೊಬ್ಬರ ವಿತರಣೆ ಮಾಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗ ಉತ್ತಮ ಮಳೆಯಾಗುತ್ತಿದೆ ಇನ್ನೂ ಮಳೆಯಾಗುವ ನಿರೀಕ್ಷೆಯಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜಗಳ ಕೊರತೆಯಿಲ್ಲ. ಬಿತ್ತನೆ ಬೀಜ, ಗೊಬ್ಬರ ಪಡೆದುಕೊಂಡು ಬಿತ್ತನೆ ಕಾರ್ಯ ಮಾಡಿ ಎಂದು ಹೇಳಿದರು.
ರೈತರಿಗೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಪರಿಕರಗಳನ್ನು ವಿತರಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಕೃಷಿ ಪರಿಕರದಾರರಿಗೆ ಸೂಚನೆ ನೀಡಿದರು. ಮಣ್ಣಿನ ಆಧಾರದ ಮೇಲೆ ಸಾಲಿನಿಂದ ಹೆಚ್ಚು ಅಂತರ (ಅಗಲ ಸಾಲು) ಬಿತ್ತನೆಗೆ ಪ್ರೋತ್ಸಾಹ ನೀಡುವುದರಿಂದ ತೊಗರಿ ಇಳುವರಿ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ತಾಲೂಕು ಸಹಾಯಕ ಕೃಷಿ ನಿರ್ದೇಶಕ ಆಮಗೊಂಡ ಬಿರಾದಾರ, ತಾಂತ್ರಿಕ ಅಧಿಕಾರಿ ಗಾಯತ್ರಿ ಶಿಂಧೆ, ಆರಕ್ಷಕ ಸಿ.ಎಂ ಪಾಟೀಲ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹಿರೇಮಠ ಸೇರಿ ಅನೇಕ ರೈತರು ಉಪಸ್ಥಿತರಿದ್ದರು.