ಬೆಂಗಳೂರು: ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ(K N Rajanna) ಪ್ರತಿಕ್ರಿಯಿಸಿದ್ದು, ಸರ್ಕಾರಿ ಕಾರ್ಯಕ್ರಮಕ್ಕೆ ಶಿಷ್ಟಾಚಾರವಿರುತ್ತೆ, ಅದನ್ನು ಫಾಲೋ ಮಾಡಬೇಕು. ಸಿದ್ದರಾಮಯ್ಯ ಮಾಸ್ ಲೀಡರ್, ಅವರನ್ನು ಸೈಡ್ಲೈನ್ ಮಾಡಲಾಗಲ್ಲ ಎಂದು ಹೇಳಿದ್ದಾರೆ.