ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ, ನಿಲ್ಲಿಸುವುದೂ ಇಲ್ಲ: DK ಶಿವಕುಮಾರ್

DK Shivakumar
DK Shivakumar
Published on
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ DK ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಸಂಜೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, "ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವವರ ಹೆಸರಿನಲ್ಲಿ ಪಡೆಯಲಾಗುತ್ತಿದೆ. ಗೃಹಜ್ಯೋತಿಯಲ್ಲಿ ಈ ಸಮಸ್ಯೆ ಎದುರಾಗುವುದಿಲ್ಲ" ಎಂದು ಹೇಳಿದರು.
"ಮೃತಪಟ್ಟಿರುವವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ತೆಗೆದುಕೊಳ್ಳಲಾಗಿದೆ. ಈ ರೀತಿ ದುರುಪಯೋಗವಾಗುವುದನ್ನು ತಪ್ಪಿಸಬೇಕು. ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆ" ಎಂದರು.
ಸ್ಥಿತಿವಂತರು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬೇಡಿ ಎನ್ನುವ ಸಲಹೆಯ ಬಗ್ಗೆ ಕೇಳಿದಾಗ, "ಇದರ ಬಗ್ಗೆ ನೋಡೋಣ" ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net