ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು ಎಂದು ಹೇಳಿದರು.