ಸದ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಹಿರಿಯ ಹಾಗೂ ಯುವ ನಾಯಕರ ಮಿಶ್ರಣ ಕಂಡುಬಂದಿದ್ದು, ಕೆ ಎಚ್ ಮುನಿಯಪ್ಪ, ಡಾ.ಜಿ ಪರಮೇಶ್ವರ್, ಯು.ಟಿ. ಖಾದರ್, ಎನ್.ಎ. ಹ್ಯಾರಿಸ್, ಬೋಸರಾಜು, ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಎಂ. ಕೃಷ್ಣಪ್ಪ ಮತ್ತು ಶಿವರಾಜ್ ತಂಗಡಗಿ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಕೊನೆಯ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎನ್ನಲಾಗಿದ್ದು, ಇಬ್ಬರಲ್ಲಿ ಯಾರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.