ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ! ಯಾವ ಜಿಲ್ಲೆಗಳಲ್ಲಿ ಬಿಸಿಲು ಇನ್ನಷ್ಟು ಹೆಚ್ಚಳ? ಇಲ್ಲಿದೆ ನೋಡಿ ವರದಿ
ಮಳೆಯ ಮುನ್ಸೂಚನೆ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಇಂದು ಮತ್ತು ನಾಳೆ ಹಲವೆಡೆ ವರುಣನ ಮುನ್ಸೂಚನೆ
ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ
ಯಾವ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ? ಇಲ್ಲಿದೆ ನೋಡಿ ವರದಿ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿ ಅದಾಗಲೇ ತಟ್ಟಲಾರಂಭಿಸಿದೆ. ಉಷ್ಣಾಂಶದ ವಾತಾವರಣದಿಂದ ಬೆವರುತ್ತಿರುವ ಜನತೆ, ತಂಪಾದ ಆಹಾರಗಳ ಸೇವನೆಯನ್ನು ಹೆಚ್ಚಿಸಿದ್ದಾರೆ. ಬಿಸಿಲಿನ ಬೇಗೆ ತಾಳಲಾರದೆ ಕೊಂಚ ಮಳೆ ಸುರಿದರೆ ಸಾಕಪ್ಪ ಎನ್ನುತ್ತಿದ್ದಾರೆ. ಅಂತೆಯೇ, ಇಂದು (ಮಾ.15) ರಾಜ್ಯದ ಕೆಲವೆಡೆ ವರುಣನ ಮುನ್ಸೂಚನೆ ಲಭಿಸಿದೆ.
ದಕ್ಷಿಣ ಕರ್ನಾಟಕ
ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ರಾಜ್ಯ ರಾಜಧಾನಿಯಲ್ಲಿ ಮಳೆ ಬೀಳುವ ಲಕ್ಷಣಗಳು ಗೋಚರಿಸಿಲ್ಲ. ಇಂದು ಮತ್ತು ನಾಳೆ ಕೆಲವೇ ಕೆಲವು ಪ್ರದೇಶಗಳಲ್ಲಿ ವರುಣನ ಆರ್ಭಟ ಇರಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡುಗು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಲಭಿಸಿದೆ. ಇನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಎಲ್ಲೆಲ್ಲಿ ತಾಪಮಾನ ಹೆಚ್ಚಳ?
ಉತ್ತರ ಕರ್ನಾಟಕ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ತಾಪಮಾನ ಹೆಚ್ಚಾಗಲಿದೆ. ಅದೇ, ಚಾಮರಾಜನಗರ, ಮೈಸೂರು, ತುಮಕೂರು, ದಾವಣಗೆರೆ, ಹಾಸನ, ಮಂಡ್ಯ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಮಾನ ಇರಲಿದೆ,(ಏಜೆನ್ಸೀಸ್).