ನೀರಲಕೊಪ್ಪ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂೆ ದಿನ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಮಂಜುಳಾ ಶಿವಪ್ಪ ಇಲಾಳ, ಅಂಗನವಾಡಿ ಕಾರ್ಯಕರ್ತೆ ದ್ಯಾಮಕ್ಕ ಮ್ಯಾಗಳಮನಿ, ಆಶಾ ಕಾರ್ಯಕರ್ತೆ ವಿಜಯಲಕ್ಷ್ಮೀ ಮೇಟಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸೊಳ್ಳೆಗಳನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಿ
ಹನುಮಸಾಗರ: ಆರೋಗ್ಯದ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿ ಮಂಜುಳಾ ಶಿವಪ್ಪ ಇಲಾಳ ಹೇಳಿದರು.
ಸಮೀಪದ ಹನುಮನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನೀರಲಕೊಪ್ಪ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ Dengue ದಿನಾಚರಣೆಯಲ್ಲಿ ಮಾತನಾಡಿದರು.
ತೀವ್ರ ಜ್ವರ, ತಲೆನೋವು ಕಂಡುಬಂದಾಗ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. Dengue ಜ್ವರ ಲಕ್ಷಣಗಳಿದ್ದರೆ ಕಣ್ಣುಗಳ ಹಿಂಭಾಗ ನೋವು, ಕೀಲು, ಸ್ನಾಯುಗಳ ನೋವು, ಚರ್ಮದ ಮೇಲೆ ಕೆಂಪು ದದ್ದುಗಳು ಕಾಣುತ್ತವೆ. ಕೂಡಲೇ ಚಿಕಿತ್ಸೆ ಪಡೆದರೆ ಗುಣವಾಗುತ್ತದೆ ಎಂದರು.
ಮನೆ ಸುತ್ತಮುತ್ತ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿಬೇಕು ಎಂದರು. ಅಂಗನವಾಡಿ ಕಾರ್ಯಕರ್ತೆ ದ್ಯಾಮಕ್ಕ ಮ್ಯಾಗಳಮನಿ, ಆಶಾ ಕಾರ್ಯಕರ್ತೆ ವಿಜಯಲಕ್ಷ್ಮೀ ಮೇಟಿ ಇತರರಿದ್ದರು.