ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ಮನಸ್ಸೋ ಇಚ್ಛೆ ನೀರು ಹರಿಸಲಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ನಮ್ಮ ಜಲಾಶಯಗಳಿಂದ ಎಷ್ಟು ನೀರು ಬಿಡಲಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಮೊದಲು ಬಹಿರಂಗಪಡಿಸಲಿ. ತಮಿಳುನಾಡಿನಲ್ಲಿರುವ ತಮ್ಮ ಮೈತ್ರಿ ಪಕ್ಷವನ್ನು ಖುಷಿ ಪಡಿಸಲು ರಾತ್ರೋರಾತ್ರಿ ಕಾವೇರಿ ನೀರು ಹರಿಸಿ, ಈಗ ನಮ್ಮ ಜಲಾಶಯಗಳಲ್ಲಿ ನೀರಿಲ್ಲ ಎನ್ನುತ್ತಿದ್ದಾರೆ. ಇವರಿಗೆ ಈಗ ಜ್ಞಾನೋದಯವಾಗಿದೆಯೇ..? ರಿಯಲ್ ಎಸ್ಟೇಟ್ನವರು ಆಡಳಿತ ನಡೆಸಿದರೆ ರಾಜ್ಯದ ಹಣೆಬರಹ ಹೀಗೆಯೇ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಆಕ್ರೋಶ ಹೊರಹಾಕಿದ್ದಾರೆ.